July 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

10ಕ್ಕೂ ಹೆಚ್ಚು ಬಾರಿ ವಾರೆಂಟ್ ಜಾರಿಯಾಗಿದ್ದರೂ ಸಿಗದ ಆರೋಪಿ ಕೊನೆಗೂ ಪೊಲೀಸ್ ಬಲೆಗೆ

ಕಳೆದ ಹಲವು ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ವೀರಕಂಬ ನಿವಾಸಿ 38 ವರ್ಷ ಪ್ರಾಯದ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2019 ಮತ್ತು 2020ರಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ (ಅ.ಕ್ರ :117/2019 ಮತ್ತು ಅ.ಕ್ರ :111/2020) ಸಂಬಂಧಿಸಿದಂತೆ ಮಾನ್ಯ ಬಂಟ್ವಾಳ ACJ & JMFC ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಪೊಲೀಸ್ ಕಾರ್ಯಾಚರಣೆಯ ಮುಖ್ಯಾಂಶಗಳು:

* ವಾರೆಂಟ್ ದಾಖಲೆ: ಆರೋಪಿತನ ವಿರುದ್ಧ ನ್ಯಾಯಾಲಯದಿಂದ ಸುಮಾರು 10ಕ್ಕೂ ಅಧಿಕ ಬಾರಿ ವಾರೆಂಟ್ ಜಾರಿಯಾಗಿದ್ದರೂ, ಆತ ಪೊಲೀಸರಿಗೆ ಮತ್ತು ನ್ಯಾಯಾಲಯಕ್ಕೆ ಸಿಗದೆ ತಲೆಮರೆಸಿಕೊಂಡಿದ್ದನು.

* ಬಂಧನ: ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಮತ್ತು CHC 665 ರವರ ತಂಡವು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಶ್ರಫ್‌ನನ್ನು ದಸ್ತಗಿರಿ ಮಾಡಿದ್ದಾರೆ.

* ನ್ಯಾಯಾಂಗ ಬಂಧನ: ಬಂಧಿತ ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಾನೂನು ಪ್ರಕ್ರಿಯೆ ಮುಂದುವರಿದಿದೆ.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page