October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಯುಸಿ ಪರೀಕ್ಷೆಯಲ್ಲಿ ಮಿಂಚಿದ ಶಿಕ್ಷಕ ದಂಪತಿಯ ಪುತ್ರಿ ಸ್ನೇಹಲ್ ಲುವಿಸ್ – 581 ಅಂಕಗಳ ಸಾಧನೆ

ಮೊಡಂಕಾಪ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಧಿನಿ

ನಿನ್ನೆ ಏಪ್ರಿಲ್ 9ರಂದು ಗುರುವಾರ ಪ್ರಕಟಗೊಂಡ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳದ ಮೊಡಂಕಾಪ್ ಕಾರ್ಮೆಲ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸ್ನೇಹಲ್ ಲಿನೊರಾ ಲುವಿಸ್ ಅವರು 600 ಅಂಕಗಳಿಗೆ 581 ಅಂಕಗಳನ್ನು (96.83%) ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ (Distinction) ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.

ಇವರು ಮೊಡಂಕಾಪ್ ಇನ್ಫೆಂಟ್ ಜೀಜಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸುನಿಲ್ ಲುವಿಸ್ ಹಾಗೂ ಬೋಗೊಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲವೀನಾ ಪ್ರಮಿಳಾ ಮಾರ್ಟಿಸ್ ದಂಪತಿಯ ಪುತ್ರಿ.

ಅಂಕಗಳ ವಿವರ:

ಸ್ನೇಹಲ್ ಅವರು ಹಿಂದಿ ವಿಷಯದಲ್ಲಿ 98, ಗಣಿತದಲ್ಲಿ 98, ಭೌತಶಾಸ್ತ್ರದಲ್ಲಿ 98, ರಸಾಯನಶಾಸ್ತ್ರದಲ್ಲಿ 97, ಜೀವಶಾಸ್ತ್ರದಲ್ಲಿ 96 ಹಾಗೂ ಇಂಗ್ಲಿಷ್‌ನಲ್ಲಿ 94 ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ತೋರಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ ಮತ್ತು ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದ್ದಾರೆ.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ
News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ

You cannot copy content of this page