October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಯುಸಿ ಫಲಿತಾಂಶ – ಬೈಂದೂರಿನ ಝೀನಲ್ ಫೆರ್ನಾಂಡಿಸ್‌  576 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ

ಬೈಂದೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬೈಂದೂರು ಯಡ್ತರೆ ನಿವಾಸಿ ಝೀನಲ್ ಫೆರ್ನಾಂಡಿಸ್ ಭರ್ಜರಿ ಸಾಧನೆ ಮಾಡಿದ್ದಾರೆ. ಕುಂದಾಪುರದ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ಇವರು 600 ಅಂಕಗಳಿಗೆ 576 ಅಂಕಗಳನ್ನು (96%) ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗಿದ್ದಾರೆ.

ಕುಟುಂಬದ ಹಿನ್ನೆಲೆ:

ಬೈಂದೂರು ಯಡ್ತರೆಯ ನಿವಾಸಿಗಳಾದ ಸ್ಟೇಫನ್ ರಾಜಾ ಫೆರ್ನಾಂಡಿಸ್ ಮತ್ತು ಜ್ಯೋತಿ ಫೆರ್ನಾಂಡಿಸ್ ದಂಪತಿಯ ಪುತ್ರಿಯಾಗಿರುವ ಝೀನಲ್, ಸತತ ಪರಿಶ್ರಮದಿಂದ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಂಕಗಳ ವಿವರ:

 ಹಿಂದಿ: 98

ಅರ್ಥಶಾಸ್ತ್ರ: 98

ವ್ಯವಹಾರ ಅಧ್ಯಯನ: 98

 ಲೆಕ್ಕಶಾಸ್ತ್ರ: 98

ಕಂಪ್ಯೂಟರ್ ಸೈನ್ಸ್: 97

 ಇಂಗ್ಲಿಷ್: 87

ಝೀನಲ್ ಅವರ ಈ ಶೈಕ್ಷಣಿಕ ಸಾಧನೆಗೆ ಬೈಂದೂರಿನ ಗ್ರಾಮಸ್ಥರು, ಶಿಕ್ಷಕರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದು, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

You may also like

News

ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನೆ

ಮಾಧ್ಯಮದ ನೈತಿಕ ಮೌಲ್ಯಗಳ ರಕ್ಷಣೆ ಪತ್ರಕರ್ತರ ಹೊಣೆ – ಡಾ. ಎಂ. ಮೋಹನ್ ಆಳ್ವ ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮೌಲ್ಯಗಳು ಮತ್ತು ಪಾವಿತ್ರ್ಯತೆ
News

ಗಂಜಿಮಠ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಉದ್ದೇಶ – ಡಾ. ಭರತ್ ಶೆಟ್ಟಿ ಗುರುಪುರ ಗಂಜಿಮಠ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ

You cannot copy content of this page