August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೈಕ್ಷಣಿಕ ಲೋಕದ ಧ್ರುವತಾರೆ ಅಸ್ತಂಗತ: ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಫಾದರ್ ಮೆಲ್ವಿನ್ ಜೆ. ಪಿಂಟೊ ನಿಧನ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಚ್, MLC ಐವನ್ ಡಿಸೋಜ ಹಾಗೂ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸಂತಾಪ

ಮಂಗಳೂರಿನ ಪ್ರತಿಷ್ಠಿತ ಸಂ ಸೈಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯದ) ಸಂಸ್ಥೆಗಳ ರೆಕ್ಟರ್ ಹಾಗೂ ಸಹಕುಲಪತಿಗಳಾದ ಅತೀ ವಂದನೀಯ ಫಾದರ್ ಮೆಲ್ವಿನ್ ಜೆ. ಪಿಂಟೊ (63) ಅವರು ನಿನ್ನೆ ಏಪ್ರಿಲ್ 10ರಂದು ಶುಕ್ರವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು. ಅವರ ನಿಧನವು ಕೇವಲ ಕ್ರೈಸ್ತ ಸಮುದಾಯಕ್ಕೆ ಮಾತ್ರವಲ್ಲದೆ, ಇಡೀ ಶೈಕ್ಷಣಿಕ ಮತ್ತು ಸಾಮಾಜಿಕ ವಲಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ವಿಶ್ವವಿದ್ಯಾಲಯದ ಸ್ಥಾನಮಾನಕ್ಕೆ ಇವರೇ ರೂವಾರಿ:

ಸೈಂಟ್ ಅಲೋಶಿಯಸ್ ಕಾಲೇಜು ಇಂದು ‘ಪರಿಗಣಿತ ವಿಶ್ವವಿದ್ಯಾಲಯ’ (Deemed to be University) ಆಗಿ ರೂಪುಗೊಳ್ಳುವಲ್ಲಿ ಫಾದರ್ ಮೆಲ್ವಿನ್ ಪಿಂಟೊ ಅವರ ಪಾತ್ರ ಅನನ್ಯವಾದುದು. ಶೈಕ್ಷಣಿಕ ಆವಿಷ್ಕಾರಗಳು ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹೊಸ ಕ್ರಾಂತಿ ಮಾಡಿದ್ದ ಅವರು, ಕಾಲೇಜಿನ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು.

ಗಣ್ಯರ ಸಂತಾಪ:

ಫಾದರ್ ಮೆಲ್ವಿನ್ ಅವರ ನಿಧನಕ್ಕೆ ರಾಜ್ಯದ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಹಾಗೂ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

“ಫಾದರ್ ಮೆಲ್ವಿನ್ ಅವರ ಅಗಲಿಕೆ ಸಮಾಜದಲ್ಲಿ ದೊಡ್ಡ ಶೂನ್ಯತೆಯನ್ನು ಸೃಷ್ಟಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗಳು ಮತ್ತು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಅವರು ಹೊಂದಿದ್ದ ಆತ್ಮೀಯ ಸಂಬಂಧ ಸದಾ ಸ್ಮರಣೀಯ,” ಎಂದು MLC ಐವನ್ ಡಿಸೋಜ ಕಂಬನಿ ಮಿಡಿದಿದ್ದಾರೆ.

ಸೇವಾ ಪಥ ಮತ್ತು ವ್ಯಕ್ತಿತ್ವ:

* ಸೊಸೈಟಿ ಆಫ್ ಜೀಸಸ್ (SJ) ಬಳಗದ ಸಕ್ರಿಯ ಸದಸ್ಯರಾಗಿ ದಶಕಗಳ ಕಾಲ ಸೇವೆ.

* ವಿದ್ಯಾರ್ಥಿ ಸ್ನೇಹಿ ಆಡಳಿತಗಾರ ಮತ್ತು ಅಧ್ಯಾತ್ಮಿಕ ಮಾರ್ಗದರ್ಶಕರಾಗಿ ಜನಪ್ರಿಯತೆ.

* ರೋಮ್‌ನ ವ್ಯಾಟಿಕನ್ ರೇಡಿಯೊದ ಏಷ್ಯಾ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅನುಭವ.

* ಸಾಮಾಜಿಕ ಸಾಮರಸ್ಯ ಮತ್ತು ಶಿಕ್ಷಣದ ಉನ್ನತೀಕರಣಕ್ಕಾಗಿ ನಿರಂತರ ಶ್ರಮ.

ಅವರ ನಿಧನಕ್ಕೆ ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿ ಸಂಘದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಲಾಗಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page