October 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಮಂಗಳೂರಿಗೆ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರು ಇದೇ ಏಪ್ರಿಲ್ 27ರಂದು ಸಂಜೆ 7 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಪ್ರಥಮ ಬಾರಿಗೆ ಕರಾವಳಿಗೆ ಭೇಟಿ ನೀಡುತ್ತಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಮುಖ್ಯಾಂಶಗಳು:

* ಪುನರಾಯ್ಕೆ: ಜೈಲಿನಲ್ಲಿದ್ದ ಅವಧಿಯಲ್ಲೇ (ಜನವರಿಯಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ) ಎಂ.ಕೆ. ಫೈಝಿ ಅವರು 2026–28ನೇ ಸಾಲಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದರು.

* ಜೈಲು ವಾಸ: ಈಡಿ (ED) ದಾಖಲಿಸಿದ ಪ್ರಕರಣದ ಹಿನ್ನೆಲೆಯಲ್ಲಿ 11 ತಿಂಗಳು ಜೈಲುವಾಸ ಅನುಭವಿಸಿದ್ದ ಅವರು, ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

* ಲೀಡರ್ಸ್ ಕಾನ್ ಕ್ಲೇವ್: ಏಪ್ರಿಲ್ 28ರಂದು ಸಂಜೆ 4 ಗಂಟೆಗೆ ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಡಿಪಿಐ ನಾಯಕರ ಸಮಾವೇಶ ನಡೆಯಲಿದೆ.

ಕಾರ್ಯಕ್ರಮದ ವಿವರ:

ಮಂಗಳೂರಿನ ಕಾರ್ಯಕ್ರಮದ ನಂತರ ಏಪ್ರಿಲ್ 29ರಂದು ಉಡುಪಿಯಲ್ಲಿ ನಡೆಯಲಿರುವ ಪಕ್ಷದ ಬೃಹತ್ ಸಮಾವೇಶದಲ್ಲಿಯೂ ಫೈಝಿ ಭಾಗವಹಿಸಲಿದ್ದಾರೆ. ಈ ಪ್ರವಾಸದಲ್ಲಿ ಅವರೊಂದಿಗೆ ರಾಷ್ಟ್ರೀಯ ಉಪಾಧ್ಯಕ್ಷ ಮುಹಮ್ಮದ್ ಶಫಿ (ರಾಜಸ್ಥಾನ್), ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಂಕಜಾಲ್, ರಿಯಾಝ್ ಫರಂಗಿಪೇಟೆ, ಇಲ್ಯಾಸ್ ಮುಹಮ್ಮದ್ ತುಂಬೆ, ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರ್ಯಾಂಕೋ ಸೇರಿದಂತೆ ರಾಜ್ಯ, ಜಿಲ್ಲಾ. ಹಲವು ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು
News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್

You cannot copy content of this page