August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಪುನರಾಯ್ಕೆ

ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರ ಪ್ರಾರ್ಥನೆ ಹಾಗೂ ಮಾರ್ಗದರ್ಶನದಲ್ಲಿ ನಡೆದ ಚುನಾವಣೆ

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2026-27 ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ಇಂದು ಮೇ 10ರಂದು ಭಾನುವಾರ ನಡೆಯಿತು. ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಚುನಾವಣೆಯ ಮೊದಲು ಪ್ರಾರ್ಥನೆಯ ಮೂಲಕ ಚುನಾವಣೆಯನ್ನು ನಡೆಸಲು ಮಾರ್ಗದರ್ಶನ ನೀಡೀದರು. ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಥಮ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ವಲೆನ್ಸಿಯಾ, ದ್ವಿತೀಯ ಉಪಾಧ್ಯಕ್ಷ ಆಲ್ಬರ್ಟ್ ಸುನಿಲ್ ಮೊನಿಸ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೇರೆಬೈಲ್, ಸಹ ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್ ಆಮ್ಮೆಂಬಳ, ಖಜಾಂಚಿ ಫ್ರಾನ್ಸಿಸ್ ಮೊಂತೇರೊ ಮರಿಯಾಶ್ರಮ್ ತಲಪಾಡಿ, ಸಹ ಖಜಾಂಚಿ ಸ್ಟ್ಯಾನಿ ಮಿರಾಂದಾ ನೀರುಡೆ ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಮಾಜಿ ಅಧ್ಯಕ್ಷ ನೈಜಿಲ್ ಪಿರೇರಾ ಚುನಾವಣಾಧಿಕಾರಿಯಾಗಿ ಮತ್ತು ಸಹ ಚುನಾವಣಾ ಅಧಿಕಾರಿಯಾಗಿ ಮಾಜಿ ಅಧ್ಯಕ್ಷ ಆ್ಯಂಡ್ರೂ ಎಲ್. ನೊರೊನ್ಹಾ ಚುನಾವಣೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಳೆದ 5 ವರ್ಷಗಳಿಂದ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾಗಿ ನಿಷ್ಟಾವಂತ ಸೇವೆ ನೀಡಿದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರನ್ನು ಸನ್ಮಾನಿಸಲಾಯಿತು.

ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ, ನಿಕಟ ಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಮಾಜಿ ಕೇಂದ್ರೀಯ ಅಧ್ಯಕ್ಷರುಗಳಾದ ಜೆರಾಲ್ಡ್ ಡಿಕೋಸ್ತ, ಲ್ಯಾನ್ಸಿ ಡಿಕುನ್ಹಾ, ಅನಿಲ್ ಲೋಬೊ, ಪ್ಲೇವಿ ಡಿಸೋಜ, ಸ್ಟ್ಯಾನಿ ಲೋಬೊ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ನನ್ನ ಮೇಲೆ ಪ್ರೀತಿ ಇಟ್ಟು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಹೃದಯಾಂತರಾಳಾದಿಂದ ಕೃತಜ್ಞತೆಗಳನ್ನು ಸಲ್ಲಿಸಿದರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page