July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ ನೀಡಿದೆ. ಕೇಂದ್ರ ಸಂಘಟನೆಯ ಮಾರ್ಗದರ್ಶನದಲ್ಲಿ ಅಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತವೂ ಔಷಧ ವ್ಯಾಪಾರಸ್ಥರು ಮುಷ್ಕರ ನಡೆಸಲಿದ್ದಾರೆ ಎಂದು ದ.ಕ. ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಅರುಣ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿಸ್ತೃತ ಮಾಹಿತಿ ನೀಡಿದ ಅವರು, ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಮತ್ತು ಇ-ಫಾರ್ಮಸಿಗಳು ಯಾವುದೇ ವೈದ್ಯಕೀಯ ನಿಯಮಗಳನ್ನು ಪಾಲಿಸದೆ ಅವ್ಯಾಹತವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದೇ ಈ ಪ್ರತಿಭಟನೆಗೆ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನೆಗೆ ಪ್ರಮುಖ ಕಾರಣಗಳು:

* ವೈದ್ಯರ ಚೀಟಿ ದುರ್ಬಳಕೆ: ಔಷಧಿಗಳು ಸಾಮಾನ್ಯ ವಸ್ತುಗಳಲ್ಲ. ವೈದ್ಯರ ಅಧಿಕೃತ ಚೀಟಿ (Prescription) ಇಲ್ಲದೆ ಇವುಗಳನ್ನು ಮಾರಾಟ ಮಾಡುವಂತಿಲ್ಲ. ಆದರೆ, ಆನ್‌ಲೈನ್‌ನಲ್ಲಿ ಯಾವುದೇ ಚೀಟಿ ಇಲ್ಲದೆ ಅಥವಾ ಒಂದೇ ಚೀಟಿಯನ್ನು ಪದೇ ಪದೆ ಬಳಸಿ ನಿಯಮಬಾಹಿರವಾಗಿ ಔಷಧಿಗಳನ್ನು ಪಡೆಯಲಾಗುತ್ತಿದೆ.

* ಮಾದಕ ದ್ರವ್ಯಗಳ ಜಾಲ: ಆನ್‌ಲೈನ್ ವ್ಯವಹಾರದ ಮರೆಯಲ್ಲಿ ಔಷಧಿಗಳ ಹೆಸರಿನಲ್ಲಿ ಮಾದಕ ದ್ರವ್ಯಗಳು ಸಹ ಸರಬರಾಜಾಗುತ್ತಿದ್ದು, ಇದು ಇಂದಿನ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗಲು ದಾರಿಕಲ್ಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

* ನಕಲಿ ಔಷಧಿಗಳ ಭೀತಿ: ಆನ್‌ಲೈನ್ ಮುಖಾಂತರ ನಕಲಿ ಔಷಧಿಗಳು ಗ್ರಾಹಕರನ್ನು ತಲುಪುವ ಅಪಾಯ ಹೆಚ್ಚಾಗಿದೆ.

ಕೇಂದ್ರ ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳು:

ಔಷಧಿಗಳ ಆನ್‌ಲೈನ್ ಮಾರಾಟಕ್ಕೆ ಕಾನೂನುಬದ್ಧ ಮುದ್ರೆ ಒತ್ತುವ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ಸಂಘಟನೆಯು ಆಗ್ರಹಿಸಿದೆ. ಪ್ರಮುಖವಾಗಿ:

  1. ಔಷಧಿಗಳ ಆನ್‌ಲೈನ್ ಮಾರಾಟಕ್ಕೆ ಮುಕ್ತ ಅವಕಾಶ ನೀಡುವ 28-8-2018ರ ಜಿಎಸ್ಆರ್ 817 (GSR 817) ಶಾಸನವನ್ನು ರದ್ದುಗೊಳಿಸಬೇಕು.
  2. ನಕಲಿ ಔಷಧಿಗಳ ಪೂರೈಕೆಗೆ ಪರೋಕ್ಷವಾಗಿ ಕಾರಣವಾಗಿರುವ 26-3-2020 ರ ಜಿಎಸ್‌ಆರ್ 220 (GSR 220) ಶಾಸನವನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು.

ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ಡಾ. ಎ.ಕೆ. ಜಮಾಲ್ ಸೇರಿದಂತೆ ಸಂಘಟನೆಯ ಇತರೆ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇ 20 ರಂದು ಜಿಲ್ಲೆಯಾದ್ಯಂತ ಮೆಡಿಕಲ್ ಶಾಪ್‌ಗಳು ಮುಚ್ಚಲಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page