October 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಕ್ಸೋ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ

ಪೋಕ್ಸೋ (POCSO) ಪ್ರಕರಣದಡಿ ಬಂಧಿತನಾಗಿದ್ದ ಜಾರ್ಖಂಡ್ ಮೂಲದ ಆರೋಪಿ ರೇ ಮುಂಡ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ಣಾಡು ಗ್ರಾಮದ ಪಾಲೇಪ್ಪಾಡಿಗೆ ತನ್ನದೇ ಊರಿನ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪ ರೇ ಮುಂಡ ಎಂಬಾತನ ಮೇಲಿತ್ತು. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಹಿನ್ನೆಲೆಯಲ್ಲಿ, ಪೊಲೀಸರು ಈತನನ್ನು 2026 ಫೆಬ್ರವರಿ 13ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನ್ಯಾಯಾಲಯದಿಂದ ಜಾಮೀನು:

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯ ಪರವಾಗಿ ಕಜೆ ಲಾ ಚೇಂಬರ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಪುತ್ತೂರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಾದ-ವಿವಾದಗಳನ್ನು ಆಲಿಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸರಿತಾ ಡಿ. ಅವರು ಮೇ 19ರಂದು ಮಂಗಳವಾರ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

You may also like

News

‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು
News

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ

ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು. ಅಕ್ಟೋಬರ್

You cannot copy content of this page