October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಾವಳಿಯ ಹೆಣ್ಣುಮಗಳ ಐತಿಹಾಸಿಕ ಸಾಧನೆ – ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಡಿ’ಆಲ್ಮೇಡಾ ನೇಮಕ!

ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಯಾವುದೇ ಹಿನ್ನೆಲೆ ಇಲ್ಲದಿದ್ದರೂ ದೇಶದ ಅತ್ಯುನ್ನತ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬುದನ್ನು ಮಂಗಳೂರಿನ ನಿಶೆಲ್ ಫ್ಲೋರಾ ಡಿ’ಆಲ್ಮೇಡಾ ಸಾಬೀತುಪಡಿಸಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿನಿಯಾಗಿರುವ ಇವರು, ಕಠಿಣವಾದ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ (SSB) ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು ಸಾಧಿಸಿ, ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿ ಇದೀಗ ಭಾರತೀಯ ನೌಕಾಪಡೆಯಲ್ಲಿ ‘ಸಬ್ ಲೆಫ್ಟಿನೆಂಟ್’ ಅಧಿಕಾರಿಯಾಗಿ ದೇಶಸೇವೆಗೆ ಸಜ್ಜಾಗಿದ್ದಾರೆ.

ಎನ್‌ಸಿಸಿ ಟು ನೌಕಾಪಡೆ – ಸಾಧನೆಯ ಹಾದಿ:

ಶಾಲಾ ದಿನಗಳಿಂದಲೇ ಪ್ರತಿಭಾವಂತೆಯಾಗಿದ್ದ ನಿಶೆಲ್, ಕೇವಲ ಓದಿಗೆ ಮಾತ್ರ ಸೀಮಿತವಾಗದೆ ಕರಾಟೆ, ನೃತ್ಯ, ಸಂಗೀತ, ಚಿತ್ರಕಲೆ ಹಾಗೂ ಕಾರ್ಯಕ್ರಮ ನಿರೂಪಣೆಯಲ್ಲೂ ಮುಂಚೂಣಿಯಲ್ಲಿದ್ದರು. ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಓದುತ್ತಿದ್ದಾಗ ಎನ್‌ಸಿಸಿ (NCC) ಸೇರಿದ್ದು ಅವರ ಬದುಕಿಗೆ ಹೊಸ ತಿರುವು ನೀಡಿತು. ತಮ್ಮ ಅತ್ಯುತ್ತಮ ನಾಯಕತ್ವ ಗುಣಗಳಿಂದಾಗಿ ಶಿಕ್ಷಣ ಸಂಸ್ಥೆಯ ಇತಿಹಾಸದಲ್ಲೇ ಗಣರಾಜ್ಯೋತ್ಸವ ಪಥಸಂಚಲನ (RD Parade) ಶಿಬಿರಕ್ಕೆ ಆಯ್ಕೆಯಾದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದೇ ನೌಕಾಪಡೆ ಸೇರುವ ಅವರ ಕನಸಿಗೆ ಬಲವಾದ ಅಡಿಪಾಯ ಹಾಕಿಕೊಟ್ಟಿತು.

ಏರೋನಾಟಿಕಲ್ ಎಂಜಿನಿಯರಿಂಗ್‌ನಿಂದ ದೇಶಸೇವೆಯವರೆಗೆ:

ಪಿಯುಸಿ ಮುಗಿಸಿದ ನಂತರ ನಿಶೆಲ್ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ ಪಡೆದರು. ಕಾರ್ಪೊರೇಟ್ ಕೆಲಸಗಳ ಬೆನ್ನತ್ತದೆ, ದೇಶಸೇವೆಯನ್ನೇ ಧೇಯವಾಗಿಸಿಕೊಂಡು ಕಠಿಣವಾದ ಎಸ್‌ಎಸ್‌ಬಿ ಪರೀಕ್ಷೆಗೆ ಸಿದ್ಧತೆ ನಡೆಸಿ ಯಶಸ್ವಿಯಾದರು. ಇದೀಗ ತರಬೇತಿ ಪೂರೈಸಿ ನೌಕಾಪಡೆಯ ಜವಾಬ್ದಾರಿಯುತ ತಾರೆಯಾಗಿ ಹೊರಹೊಮ್ಮಿದ್ದಾರೆ.

“ಒಬ್ಬ ಸಾಮಾನ್ಯ ವಿದ್ಯಾರ್ಥಿನಿಯಾಗಿ ಸೈಂಟ್ ಅಲೋಶಿಯಸ್ ಕಾಲೇಜಿನ ತರಗತಿ ಕೊಠಡಿ ಪ್ರವೇಶಿಸಿದ್ದ ನಿಶೆಲ್, ಇಂದು ಭಾರತೀಯ ಸಶಸ್ತ್ರ ಪಡೆಯ ಹೆಮ್ಮೆಯ ಅಧಿಕಾರಿಯಾಗಿ ಹೊರಹೊಮ್ಮಿರುವುದು ಇಡೀ ಕರಾವಳಿಗೆ ಗೌರವದ ವಿಷಯ.”

ಮೇ 29 ರಂದು ಭವ್ಯ ನಾಗರಿಕ ಸನ್ಮಾನ ಹಾಗೂ ಮೆರವಣಿಗೆ:

ದೇಶ ಕಾಯುವ ಉನ್ನತ ಹುದ್ದೆಗೆ ಲಗ್ಗೆ ಇಟ್ಟಿರುವ ಮಂಗಳೂರಿನ ಈ ಹೆಮ್ಮೆಯ ಮಗಳನ್ನು ಗೌರವಿಸಲು ಕರಾವಳಿ ಜನತೆ ಸಜ್ಜಾಗಿದ್ದಾರೆ. ಮೇ 29ರಂದು ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಭವ್ಯ ಮೆರವಣಿಗೆ ಹಾಗೂ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಲು ಅವರ ಕುಟುಂಬಸ್ಥರು, ಶಿಕ್ಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಸಕಲ ಸಿದ್ಧತೆ ನಡೆಸಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page