August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ – ಮುಕ್ತಾಯಗೊಂಡ ಅಧಿಕಾರ ಬದಲಾವಣೆಯ ಹೈಡ್ರಾಮಾ!

ಕರ್ನಾಟಕ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಇದೀಗ ಅಧಿಕೃತವಾಗಿ ಮುಕ್ತಾಯದ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಘನತವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ರಾಜೀನಾಮೆ ಹಾದಿ:

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೀಡಿದ ಸ್ಪಷ್ಟ ಸೂಚನೆಯ ಹಿನ್ನೆಲೆಯಲ್ಲಿ, ಮೇ 28ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಕೂಟ (ಬ್ರೇಕ್ ಫಾಸ್ಟ್ ಮೀಟಿಂಗ್) ಆಯೋಜಿಸಿದ್ದರು. ಈ ಸಭೆಯಲ್ಲೇ ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ನಿರ್ಧಾರವನ್ನು ಪ್ರಕಟಿಸಿದ್ದರು.

ಅಧಿಕೃತ ಅಂಗೀಕಾರ:

ಉಪಹಾರ ಕೂಟದ ಬಳಿಕ ನೇರವಾಗಿ ರಾಜ್‌ಭವನಕ್ಕೆ (ಲೋಕಭವನ) ತೆರಳಿದ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಾದ ಪ್ರಭುಶಂಕರ್ ಅವರಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದರು. ಪ್ರಸ್ತುತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾಧಿಕಾರವನ್ನು ಬಳಸಿ ಈ ರಾಜೀನಾಮೆ ಪತ್ರವನ್ನು ಸ್ವೀಕರಿಸಿ, ಅಂಗೀಕಾರ ಮುದ್ರೆ ಒತ್ತಿದ್ದಾರೆ.

ಈ ಬೆಳವಣಿಗೆಯೊಂದಿಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ದ್ವಿತೀಯ ಅವಧಿಯ ಆಡಳಿತದ ಪರ್ವ ಮುಕ್ತಾಯಗೊಂಡಂತಾಗಿದ್ದು, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯ ಪದಗ್ರಹಣಕ್ಕೆ ಹಾದಿ ಸುಗಮವಾಗಿದೆ. ಹೊಸ ಸರ್ಕಾರದ ರಚನೆ ಹಾಗೂ ಸಚಿವ ಸಂಪುಟ ಪುನರ್ರಚನೆಯ ಚಟುವಟಿಕೆಗಳು ರಾಜಧಾನಿಯಲ್ಲಿ ಬಿರುಸುಗೊಂಡಿವೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page