October 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆ.ಜೆ. ಜಾರ್ಜ್‌ ಅವರಿಗೆ ಉಪಮುಖ್ಯಮಂತ್ರಿ, ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಕೇಂದ್ರೀಯ ಸಮಿತಿಯ ಪರವಾಗಿ ಸಂತೋಷ್ ಡಿಸೋಜ ಬಜ್ಪೆ ಆಗ್ರಹ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕರ್ನಾಟಕ ಸರ್ಕಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಕೇಂದ್ರೀಯ ಸಮಿತಿ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಅವರು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಕೆ.ಜೆ. ಜಾರ್ಜ್ ಅವರನ್ನು ಉಪಮುಖ್ಯಮಂತ್ರಿಯಾಗಿ ಹಾಗೂ ಕರಾವಳಿ ಕರ್ನಾಟಕದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸಿದೆ.

ಕೆ.ಜೆ. ಜಾರ್ಜ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ ಹಲವು ದಶಕಗಳಿಂದ ಸೇವೆ ಸಲ್ಲಿಸಿದ್ದು, ಆಡಳಿತಾತ್ಮಕ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜದ ವಿವಿಧ ವರ್ಗಗಳೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಕಥೊಲಿಕ್ ಸಭಾ ಇದರ ಕೇಂದ್ರೀಯ ಸಮಿತಿ ಅಭಿಪ್ರಾಯಪಟ್ಟಿದೆ.

ಅದೇ ರೀತಿ, ಕರಾವಳಿ ಭಾಗದ ಕ್ರೈಸ್ತ ಸಮುದಾಯದ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿರುವ ಐವನ್ ಡಿಸೋಜ ಅವರು ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಮುಖ್ಯ ಸಚೇತಕರಾಗಿ ಹಾಗೂ ವಿವಿಧ ಜವಾಬ್ದಾರಿಯುತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಸಮಾಜದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳಲ್ಲಿ ಅವರ ಕೊಡುಗೆ ಗಮನಾರ್ಹವಾಗಿದ್ದು, ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯವು ಕಾಂಗ್ರೆಸ್ ಪಕ್ಷದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದೆ. ಆದಾಗ್ಯೂ, ಉನ್ನತ ಹುದ್ದೆಗಳ ಹಂಚಿಕೆಯಲ್ಲಿ ಸಮುದಾಯಕ್ಕೆ ನಿರೀಕ್ಷಿತ ಮಟ್ಟದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಬೇಸರವನ್ನು ಕೇಂದ್ರ ಸಮಿತಿ ವ್ಯಕ್ತಪಡಿಸಿದೆ. ಎಲ್ಲ ಸಮುದಾಯಗಳ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ರಚನೆಯ ವೇಳೆ ಕ್ರೈಸ್ತ ಸಮುದಾಯಕ್ಕೂ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಸಮಿತಿ ಮನವಿ ಮಾಡಿದೆ.

ಐವನ್ ಡಿಸೋಜ ಅವರನ್ನು ಸಚಿವರನ್ನಾಗಿ ಹಾಗೂ ಕೆ.ಜೆ. ಜಾರ್ಜ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವುದರಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗುವುದರ ಜೊತೆಗೆ ರಾಜ್ಯದಲ್ಲಿ ಸಾಮಾಜಿಕ ಸಮತೋಲನ ಮತ್ತು ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಕೇಂದ್ರೀಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page