October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದ ಸ್ಟ್ಯಾನಿ ಪಿಂಟೋ ಬೆಂಗಳೂರು

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡಿರುವ ಜನಪ್ರಿಯ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ಕ್ರೈಸ್ತ ಸಂಘಟನೆ ಹಾಗೂ ಸಮಸ್ತ ಕ್ರೈಸ್ತ ಬಾಂಧವರ ಪರವಾಗಿ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಕರ್ನಾಟಕ ಕ್ರೈಸ್ತ ಸಂಘಟನೆಯ ರಾಜ್ಯಾಧ್ಯಕ್ಷರಾದ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಟ್ಯಾನಿ ಪಿಂಟೋ ಅವರು, ಸನ್ಮಾನ್ಯ “ಡಿ.ಕೆ. ಶಿವಕುಮಾರ್ ಅವರ ದಕ್ಷ ನಾಯಕತ್ವ ಮತ್ತು ಎಲ್ಲರನ್ನೂ ಒಳಗೊಳ್ಳುವ ಸೌಹಾರ್ದಯುತ ಚಿಂತನೆಗಳು ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಿವೆ. ಸಮಸ್ತ ಕ್ರೈಸ್ತ ಸಮುದಾಯವು ಸರ್ಕಾರದ ಸದಾತ್ಮಕ ನಿರ್ಧಾರಗಳಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ,” ಎಂದು ಆಶಿಸಿದರು.

ಮುಖ್ಯಮಂತ್ರಿಗಳು ಕ್ರೈಸ್ತ ಸಂಘಟನೆಯ ಪ್ರೀತಿಯ ಅಭಿನಂದನೆಗಳಿಗೆ ಧನ್ಯವಾದಗಳನ್ನು ಅರ್ಪಿಸಿ, ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page