August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯೋಗ ದಿನಾಚರಣೆಗೆ ಭರ್ಜರಿ ಸಿದ್ಧತೆ – ಅಚ್ಚುಕಟ್ಟಿನ ವ್ಯವಸ್ಥೆಗೆ ಎಡಿಸಿ ರಾಜು ಕೆ. ಸೂಚನೆ

ಜೂನ್ 21ರಂದು ನಡೆಯಲಿರುವ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲು ಸಂಬಂಧಿತ ಎಲ್ಲಾ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಯವರಾದ ರಾಜು ಕೆ. ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್ 11ರಂದು ಗುರುವಾರ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ನಡುವಿನ ಸಮತೋಲನವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಇದರ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕು ಎಂದು ಹೇಳಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಮಹಾವಿದ್ಯಾಲಯಗಳು, ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರು ಪುರಭವನದ ಮಿನಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರು, ಸ್ವಚ್ಛತೆ, ತುರ್ತು ವೈದ್ಯಕೀಯ ನೆರವು ಹಾಗೂ ವಾಹನ ನಿಲುಗಡೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನ ಸಂಘಟನೆಗಳು ಹಾಗೂ ಸಾರ್ವಜನಿಕರಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಲಾಗಿದೆ.

 

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಯಶಸ್ವಿ ಆಯೋಜನೆ ಕುರಿತು ಚರ್ಚೆ ನಡೆಸಿದರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page