August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8 ರಂದು ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳ

ಗ್ರಾಮೀಣ ಮತ್ತು ನಗರ ಭಾಗದ ಪ್ರತಿಭಾವಂತ ಯುವಕರಿಗೆ ಉದ್ಯೋಗದ ಕನಸು ನನಸಾಗಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 2026 ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ 16ನೇ ಆವೃತ್ತಿಯಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.

ಇಂದು ಜೂನ್ 20ರಂದು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಹಾಗೂ ವಿಶ್ವಾಸಾರ್ಹ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಪ್ರಗತಿ ಸಾವಿರಾರು ಯುವಕರ ಬದುಕಿಗೆ ಹೊಸ ದಿಕ್ಕು ತೋರಿಸುತ್ತಿದೆ ಎಂದು ಹೇಳಿದರು.

300ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳ ಭಾಗವಹಿಸುವಿಕೆ:

ಈ ಬಾರಿಯ ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಮಾಹಿತಿ ತಂತ್ರಜ್ಞಾನ (ಐಟಿ), ಔಷಧೋದ್ಯಮ, ಆರೋಗ್ಯ ಸೇವೆ, ಶಿಕ್ಷಣ, ಉತ್ಪಾದನಾ ಕ್ಷೇತ್ರ, ಮಾರಾಟ ಮತ್ತು ಸೇವಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ 300ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಸಾವಿರಾರು ಉದ್ಯೋಗಾವಕಾಶಗಳು ಯುವಜನತೆಗೆ ಲಭ್ಯವಾಗಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಮಹತ್ವದ ಅವಕಾಶ ಇದಾಗಿದೆ.

ಎಲ್ಲ ವಿದ್ಯಾರ್ಹತೆಯ ಅಭ್ಯರ್ಥಿಗಳಿಗೆ ಅವಕಾಶ:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಕಲಾ, ವಿಜ್ಞಾನ, ವಾಣಿಜ್ಯ, ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಿಶೇಷವೆಂದರೆ, ಉದ್ಯೋಗ ಮೇಳದಲ್ಲಿ ಭಾಗವಹಿಸುವುದು ಸಂಪೂರ್ಣ ಉಚಿತವಾಗಿದೆ.

ಕಡ್ಡಾಯ ಆನ್ಲೈನ್ ನೋಂದಣಿ:

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿ ವೆಬ್ಸೈಟ್: www.alvaspragati.com/candidate-registration

ಅಭ್ಯರ್ಥಿಗಳಿಗೆ ವಿಶೇಷ ಸೌಲಭ್ಯಗಳು:

  • ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದಲೇ ಉಚಿತ ವಸತಿ ವ್ಯವಸ್ಥೆ
  • ಐಟಿಐ ಅಭ್ಯರ್ಥಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ
  • ಉದ್ಯೋಗ ಸಂದರ್ಶನಗಳಿಗೆ ಅನುಕೂಲಕರ ವ್ಯವಸ್ಥೆಗಳು

ತರಬೇಕಾದ ದಾಖಲೆಗಳು:

ಅಭ್ಯರ್ಥಿಗಳು ಆಗಸ್ಟ್ 7ರಂದು ಬೆಳಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿದ್ದು ಈ ದಾಖಲೆಗಳನ್ನು ತರಬೇಕು:

  • 5 ರಿಂದ 10 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು
  • ನವೀಕರಿಸಿದ ಬಯೋಡೇಟಾ / ರೆಸ್ಯೂಮ್
  • ಎಲ್ಲಾ ಅಂಕಪಟ್ಟಿಗಳ ದೃಢೀಕೃತ ಜೆರಾಕ್ಸ್ ಪ್ರತಿಗಳು
  • ಆನ್ಲೈನ್ ನೋಂದಣಿ ಸಂಖ್ಯೆ / ಐಡಿ

ಹೆಚ್ಚಿನ ಮಾಹಿತಿಗಾಗಿ : ಅಭ್ಯರ್ಥಿಗಳು : 9741440490; 9611750531, 7975223865, ಕಂಪನಿಗಳ ನೋಂದಣಿಗಾಗಿ : 9731953123, ಹಾಗೂ www.alvasparagati.com ವೆಬ್ ಸೈಟ್ ಅನ್ನು ಸಂಪರ್ಕಿಸಲು ಹೇಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ, ನೇಮಕಾತಿ ವಿಭಾಗದ ಮುಖ್ಯಸ್ಥೆ ರಂಜಿತಾ ಆಚಾರ್ಯ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಸಾವಿರಾರು ಯುವಕರ ಕನಸಿಗೆ ರೆಕ್ಕೆ ನೀಡಲಿರುವ ಆಳ್ವಾಸ್ ಪ್ರಗತಿ-2026’ ಮತ್ತೊಮ್ಮೆ ಉದ್ಯೋಗ ಲೋಕದ ಭರವಸೆಯ ಹಬ್ಬವಾಗಿ ಮೂಡಿಬರಲು ಸಜ್ಜಾಗಿದೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page