August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್ ನಲ್ಲಿ ಯುವಕನ ಕಿರುಕುಳ ಹಾಗೂ ಬ್ಲಾಕ್‌ಮೇಲ್‌ಗೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

ಪೋಕ್ಸೊ (POCSO) ಹಾಗೂ ಬಿಎನ್‌ಎಸ್ (BNS) ಅಡಿಯಲ್ಲಿ ಗಂಜಿಮಠದ ಅನೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲು

ಆರೋಪಿಯನ್ನು ಕೂಡಲೇ ಬಂಧಿಸುವಂತೆ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರಿಂದ ಒತ್ತಾಯ

ಪ್ರೀತಿ ಹಾಗೂ ಸ್ನೇಹದ ಹೆಸರಿನಲ್ಲಿ ಬ್ಲಾಕ್‌ಮೇಲ್ ಮತ್ತು ಮಾನಸಿಕ ಕಿರುಕುಳ ನೀಡಿದ ಯುವಕನ ವರ್ತನೆಗೆ ಬೇಸತ್ತು 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ ಚರ್ಚ್ ರಸ್ತೆ ನಿವಾಸಿ 17 ವರ್ಷ ಪ್ರಾಯದ ಬಾಲಕಿ  ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.  ಗಂಜಿಮಠ ನಿವಾಸಿ ಅನೀಶ್ ಪೂಜಾರಿ ಎಂಬಾತನೇ ಬಾಲಕಿಯ ಸಾವಿಗೆ ಕಾರಣನಾದ ಪ್ರಮುಖ ಆರೋಪಿಯಾಗಿದ್ದಾನೆ.

ಘಟನೆಯ ಸಾರಾಂಶ ಮತ್ತು ಹಿನ್ನೆಲೆ:

ಮೃತ ಬಾಲಕಿಯ ತಾಯಿ  ಅವರು ನೀಡಿರುವ ದೂರಿನ ಪ್ರಕಾರ, ಆರೋಪಿ ಅನೀಶ್ ಪೂಜಾರಿ ಎಂಬಾತ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದನು. ಆದರೆ ಇತ್ತೀಚಿನ ದಿನಗಳಲ್ಲಿ ಆಕೆಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಾ, ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯ ಈ ದೌರ್ಜನ್ಯ ಹಾಗೂ ಬ್ಲಾಕ್‌ಮೇಲ್‌ನಿಂದ ತೀವ್ರವಾಗಿ ನೊಂದ ಬಾಲಕಿಯು ಜೂನ್ 23ರಂದು ಸಂಜೆ 4:30 ರಿಂದ 5:30ರ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಯಿಯ ಅಳಲು: “ನನ್ನ ಮಗಳಿಗೆ ಆರೋಪಿ ಅನೀಶ್ ಪೂಜಾರಿ ನೀಡಿದ ಮಾನಸಿಕ ಹಿಂಸೆ ಮತ್ತು ಬ್ಲಾಕ್‌ಮೇಲ್ ಕಿರುಕುಳವೇ ಆಕೆ ಇಂತಹ ತೀವ್ರ ನಿರ್ಧಾರ ತೆಗೆದುಕೊಳ್ಳಲು ಮುಖ್ಯ ಕಾರಣವಾಗಿದೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಬಾಲಕಿಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸ್ ತನಿಖೆ ಮತ್ತು ಕಾನೂನು ಕ್ರಮ:

ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅವರು ಇಂದು ಜೂನ್ 24ರಂದು ಬುಧವಾರ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಅನೀಶ್ ಪೂಜಾರಿ ವಿರುದ್ಧ ಈ ಕೆಳಗಿನ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ:

* ಭಾರತೀಯ ನ್ಯಾಯ ಸಂಹಿತೆ (BNS): ಸೆಕ್ಷನ್ 352, 108, 65.

* ಪೋಕ್ಸೊ ಕಾಯ್ದೆ (POCSO Act, 2012): ಸೆಕ್ಷನ್ 6, 8, 10 ರ ಅಡಿಯಲ್ಲಿ ಪ್ರಕರಣ ದಾಖಲು.

ಪ್ರಸ್ತುತ ಸುರತ್ಕಲ್ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ಬಂಧನಕ್ಕಾಗಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಒತ್ತಾಯ

You may also like

News

Feast of  Saint Mary of Jesus Crucified Celebrated with Faith and Fellowship at Ryshivana

The Feast of Saint Mary of Jesus Crucified, also known as Saint Mariam Baouardy, the Patroness of Ryshivana, Ranipura, was
News

ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ‘ಕರ್ನಾಟಕ ಶೈಕ್ಷಣಿಕ ಪ್ರಶಸ್ತಿ’ ಗೌರವ

ಶಿಕ್ಷಣ, ನಿರೂಪಣೆ, ಸಹಪಠ್ಯ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಗೆ ಸಂದ ಪ್ರತಿಷ್ಠಿತ ಮನ್ನಣೆ “ಸಾಧಿಸುವ ಛಲವಿದ್ದರೆ ಅಸಾಧ್ಯವೂ ಸಾಧ್ಯ” ಎಂಬ ಮಾತಿಗೆ ಮತ್ತೊಮ್ಮೆ ಅರ್ಥ ತುಂಬುವಂತೆ, ಉಡುಪಿ

You cannot copy content of this page