July 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಿಂಗ ಸಮಾನತೆಗಾಗಿ ಮಹಿಳೆಯರಿಗೆ ಜಾಗೃತಿ – ಸಿಒಡಿಪಿಯಲ್ಲಿ ಪ್ರೇರಕ ತಂಡಕ್ಕೆ ವಿಶೇಷ ಕಾರ್ಯಗಾರ

ಮಹಿಳಾ ಸಬಲೀಕರಣ ಯೋಜನೆಯಡಿ ರಚನೆಯಾಗಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯೆಯರಿಗೆ ಲಿಂಗ ಸಮಾನತೆ ಕುರಿತು ವಿಶೇಷ ಕಾರ್ಯಗಾರವನ್ನು ಜೂನ್ 25ರಂದು ಸಿಒಡಿಪಿ ಸಂಸ್ಥೆಯ ಐಎಸ್‌ಡಿ ಹಾಲ್‌ನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡೀಡ್ಸ್ ಸಂಸ್ಥೆಯ ತುಕರಾಮ್ ಅವರು ಲಿಂಗ ಸಮಾನತೆ ಕುರಿತ ಸಮಗ್ರ ತರಬೇತಿಯನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ಗಂಡು-ಹೆಣ್ಣಿನ ಕುರಿತು ಸಮಾಜದಲ್ಲಿರುವ ಮನೋಭಾವ, ಲಿಂಗ ಆಧಾರಿತ ತಾರತಮ್ಯ, ಸಮಾಜದಲ್ಲಿ ಆಗಬೇಕಾದ ಧನಾತ್ಮಕ ಬದಲಾವಣೆಗಳು ಹಾಗೂ ಸಮಾನತೆಯ ಮೌಲ್ಯಗಳನ್ನು ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಅಲ್ಲದೆ, ಗುಂಪು ಚಟುವಟಿಕೆಗಳ ಮೂಲಕ ಲಿಂಗ ಸಮಾನತೆಯ ಸಂದೇಶವನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ತಲುಪಿಸುವ ತರಬೇತಿ ವಿಧಾನಗಳನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.

ಈ ಕಾರ್ಯಗಾರದಲ್ಲಿ ಒಕ್ಕೂಟ ಹಾಗೂ ಮಹಾಸಂಘಗಳಿಗೆ ಸೇರಿದ 40 ಮಂದಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸಿಒಡಿಪಿ ಸಂಸ್ಥೆಯ ಸಹ ನಿರ್ದೇಶಕರಾದ ವಂದನೀಯ ಫಾದರ್ ಲಾರೆನ್ಸ್ ಕುಟಿನ್ಹಾ, ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿ ಸುಪ್ರಿಯಾ ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಮಹಿಳೆಯರಲ್ಲಿ ಲಿಂಗ ಸಮಾನತೆಯ ಅರಿವು ಮೂಡಿಸಿ, ಸಮಾನತೆ ಆಧಾರಿತ ಸಮಾಜ ನಿರ್ಮಾಣಕ್ಕೆ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಗಾರ ಮಹತ್ವದ ಹೆಜ್ಜೆಯಾಯಿತು.

You may also like

News

ಕೆನರಾ ಬ್ಯಾಂಕ್ ₹8 ಲಕ್ಷ ಸಾಲ – ಲೋಕ ಅದಾಲತ್‌ನಲ್ಲಿ ₹15 ಸಾವಿರಕ್ಕೆ ಇತ್ಯರ್ಥ

ಮಾನವೀಯತೆ ಮೆರೆದ ನ್ಯಾಯಾಲಯ ಕಾನೂನು ಕೇವಲ ನಿಯಮಗಳ ಸಂಕಲನ ಮಾತ್ರವಲ್ಲ, ಅದರ ಹಿಂದೆ ಮಾನವೀಯತೆಯ ಹೃದಯವೂ ಇದೆ ಎಂಬುದನ್ನು ಚಿಕ್ಕಮಗಳೂರಿನಲ್ಲಿ ನಡೆದ ಒಂದು ಅಪರೂಪದ ಘಟನೆ ಮತ್ತೊಮ್ಮೆ
News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale

You cannot copy content of this page