October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜುಲೈ 1 ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ – ಹಿರಿಯ ವಿತರಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ 1ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕರಾದ ಹರಿಪ್ರಸಾದ್ ಅಡ್ಡಂಗಾಯ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಶೇಷ ಗೌರವ ಮತ್ತು ಪುರಸ್ಕಾರ:

ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕರನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಸನ್ಮಾನಿಸಲಿದ್ದಾರೆ. ಹಾಗೆಯೇ, ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ.

ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರಲಿದ್ದಾರೆ ಎಂದು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page