August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮು ಸೌಹಾರ್ದತೆಗೆ ಧಕ್ಕೆ – ‘ಸನಾತನಿ ಸಿಂಹ’ ಪೇಜ್ ನಿರ್ವಾಹಕ ಆನಂದ್, ವಿಟ್ಲ ಪೊಲೀಸರ ವಶಕ್ಕೆ

ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿಯಾದ ಆನಂದ ಎ. (ಸನಾತನಿ ಸಿಂಹ ಫೇಸ್‌ಬುಕ್ ಪೇಜ್ ನಿರ್ವಾಹಕ) ಬಂಧಿತ ಆರೋಪಿಯಾಗಿದ್ದಾನೆ.

ಪ್ರಕರಣದ ಹಿನ್ನೆಲೆ:

ಕಳೆದ ವರ್ಷ ದಿನಾಂಕ: 18-09-2025 ಫೇಸ್‌ಬುಕ್ ಪೋಸ್ಟ್‌ ಒಂದಕ್ಕೆ ‘ಸನಾತನಿ ಸಿಂಹ’ ಎಂಬ ಹೆಸರಿನ ಪೇಜ್‌ನಿಂದ ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಆಕ್ಷೇಪಾರ್ಹ ಕಮೆಂಟ್ ಮಾಡಲಾಗಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 131/2025, ಕಲಂ: 353(2) BNS 2023 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧನ ಮತ್ತು ನ್ಯಾಯಾಂಗ ಬಂಧನ:

ಪ್ರಕರಣದ ತೀವ್ರತೆ ಅರಿತು ತನಿಖೆ ಕೈಗೆತ್ತಿಕೊಂಡಿದ್ದ ವಿಟ್ಲ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಜೂನ್ 27ರಂದು ಶನಿವಾರ ಆರೋಪಿ ಆನಂದ್‌ನನ್ನು ದಸ್ತಗಿರಿ ಮಾಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಳೇ ಚಾಲಿ, 7 ಪ್ರಕರಣಗಳು ದಾಖಲು!

ಪೊಲೀಸ್ ತನಿಖೆಯ ವೇಳೆ ಬಂಧಿತ ಆರೋಪಿ ಆನಂದ್ ಈ ಹಿಂದೆಯೂ ಸಾಮಾಜಿಕ ಜಾಲತಾಣಗಳಲ್ಲಿ ಇದೇ ರೀತಿಯ ಆಕ್ಷೇಪಾರ್ಹ ಹಾಗೂ ಪ್ರಚೋದನಾಕಾರಿ ಸುದ್ದಿಗಳನ್ನು ಹರಡುತ್ತಿರುವುದು ಬೆಳಕಿಗೆ ಬಂದಿದೆ. ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಒಟ್ಟು 7 ಪ್ರಕರಣಗಳು ದಾಖಲಾಗಿವೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ತಿಳಿದುಬಂದಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page