August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

AICC ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ

ಸಂಸತ್ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಜೂನ್ 29ರಂದು ಸೋಮವಾರ ನವದೆಹಲಿಯಲ್ಲಿ ನೂತನ ರಾಜ್ಯಸಭಾ ಸದಸ್ಯರಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದಿಂದ ರಾಜ್ಯಸಭೆಗೆ ಮರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣವಚನ ಬೋಧಿಸಿದರು.

ಗಣ್ಯರ ಉಪಸ್ಥಿತಿ:

ಗೌರವಾನ್ವಿತ ಮತ್ತು ಅತ್ಯಂತ ಸರಳವಾಗಿ ನಡೆದ ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೇಶದ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಿದ್ದರು:

* ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ

* ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ

* ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ರಾಧಾ ಬಾಯಿ

* ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ

ಹಿರಿಯ ನಾಯಕರಿಂದ ಶುಭಾಶಯ:

ಪ್ರಮಾಣವಚನ ಸ್ವೀಕಾರದ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯರಾದ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು, ಸಂಸದರು ಹಾಗೂ ವಿವಿಧ ರಂಗಗಳ ಗಣ್ಯರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪುಷ್ಪಗುಚ್ಛ ನೀಡಿ, ಸಿಹಿ ಹಂಚಿ ಶುಭ ಹಾರೈಸಿದರು.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯಲಿರುವ ಖರ್ಗೆ ಅವರು, ದೇಶದ ಜನರ ಧ್ವನಿಯಾಗಿ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ತಮ್ಮ ಸಂಸದೀಯ ಸೇವೆಯನ್ನು ಮತ್ತಷ್ಟು ಬದ್ಧತೆಯಿಂದ ಮುಂದುವರಿಸುವುದಾಗಿ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page