August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗುರುವಾಯನಕೆರೆಯಲ್ಲಿ ಯುವಕನ ಅನುಮಾನಾಸ್ಪದ ಸಾವು – ಕೊಲೆ ಶಂಕೆ ವ್ಯಕ್ತಪಡಿಸಿದ ತಂದೆ!

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಯುವಕನೊಬ್ಬನ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯವಾಗಿ ಭಾರೀ ಆತಂಕ ಹಾಗೂ ಶಂಕೆ ಮೂಡಿಸಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿಯಾದ ಶರೀಫ್ ಕೆ ಎಂಬವರ ಪುತ್ರ 27 ವರ್ಷ ಪ್ರಾಯದ ಮುಸ್ತಾಕ್ ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ಈ ಯುವಕನ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಶವ ಪತ್ತೆ:

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪದಲ್ಲಿರುವ ‘ಯನೋಪೊಯೋ’ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಆವರಣದಲ್ಲಿ ಮುಸ್ತಾಕ್ ಅವರ ಮೃತದೇಹ ಪತ್ತೆಯಾಗಿದೆ. ನಿರ್ಜನ ಪ್ರದೇಶದಂತಿರುವ ಈ ಸಬ್ ಸ್ಟೇಷನ್ ಜಾಗದಲ್ಲಿ ಶವ ಕಂಡುಬಂದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಲೆ ಮಾಡಿರುವ ಶಂಕೆತಂದೆಯ ಆಕ್ರೋಶ:

ಮೃತ ಮುಸ್ತಾಕ್ ತಂದೆ ಶರೀಫ್ ಅವರು ತನ್ನ ಮಗನ ಸಾವು ಸಾಮಾನ್ಯದ್ದಲ್ಲ, ಆತನನ್ನು ಯಾರೋ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ ಎಂದು ತೀವ್ರ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆಯಿದ್ದು, ಪೊಲೀಸರು ಪ್ರಕರಣವನ್ನು ಕೇವಲ ಸಾವು ಎಂದು ಪರಿಗಣಿಸದೆ, ಕೂಲಂಕುಶವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ, ತನಿಖೆ ಆರಂಭ:

ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಠಾಣೆಯ ಪೊಲೀಸರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಪತ್ತೆಯಾದ ಜಾಗದ ಸುತ್ತಮುತ್ತಲಿನ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆಯನ್ನು ತೇಜಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಇದು ಕೊಲೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ನಿಖರ ಮಾಹಿತಿ ಹೊರಬರಬೇಕಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page