October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಲೇಜು ವಿದ್ಯಾರ್ಥಿನಿ ನಿಗೂಢ ಆತ್ಮಹತ್ಯೆ – ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ಶೋಕಸಾಗರ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯೊಬ್ಬಳು ನಿಗೂಢ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬುಧವಾರ ನಡೆದಿದೆ.

ಕಡಿರುದ್ಯಾವರ ಗ್ರಾಮದ ನಿವಾಸಿ 19 ವರ್ಷ ಪ್ರಾಯದ ನಿಖಿತಾ ಮೃತಪಟ್ಟ ದುರ್ದೈವಿ. ಈಕೆ ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಘಟನೆಯ ಹಿನ್ನೆಲೆ:

ಮನೆಯಲ್ಲಿ ನಿಖಿತಾ ಹಾಗೂ ಆಕೆಯ ತಾಯಿ ಇಬ್ಬರೇ ವಾಸವಾಗಿದ್ದರು. ಎಂದಿನಂತೆ ಜುಲಾಯ್ 1ರಂದು ಬುಧವಾರ ಬೆಳಗ್ಗೆ ತಾಯಿ ಕೆಲಸ ನಿಮಿತ್ತ ಹೊರಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದ ನಿಖಿತಾ, ತನ್ನ ಮನೆಯ ಮುಂಭಾಗದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಮಗಳ ಸಾವನ್ನು ಕಂಡು ತಾಯಿ ಕಣ್ಣೀರು ಹಾಕಿದ್ದಾರೆ.

ಪೊಲೀಸ್ ತನಿಖೆ:

ಸದ್ಯಕ್ಕೆ ವಿದ್ಯಾರ್ಥಿನಿಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬೆಳ್ತಂಗಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page