August 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

3 ವರ್ಷ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆಯ 379ನೇ ಕಲಂನಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿ ನಿವಾಸಿ 41 ವರ್ಷ ಪ್ರಾಯದ ರಾಜೇಶ್ ಎಂಬಾತ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ.

ವಿಟ್ಲ ಪೊಲೀಸ್ ಠಾಣೆಯ ASI ಜಯರಾಮ್ ನೇತೃತ್ವದಲ್ಲಿ ಸಿಪಿಸಿ 2355 ವೆಂಕಪ್ಪ ಹಾಗೂ ಸಿಪಿಸಿ 2462 ಶಿವಾನಂದ ಅವರ ತಂಡವು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ‘ಕರ್ನಾಟಕ ಶೈಕ್ಷಣಿಕ ಪ್ರಶಸ್ತಿ’ ಗೌರವ

ಶಿಕ್ಷಣ, ನಿರೂಪಣೆ, ಸಹಪಠ್ಯ ಚಟುವಟಿಕೆ ಹಾಗೂ ಸಾಮಾಜಿಕ ಸೇವೆಗೆ ಸಂದ ಪ್ರತಿಷ್ಠಿತ ಮನ್ನಣೆ “ಸಾಧಿಸುವ ಛಲವಿದ್ದರೆ ಅಸಾಧ್ಯವೂ ಸಾಧ್ಯ” ಎಂಬ ಮಾತಿಗೆ ಮತ್ತೊಮ್ಮೆ ಅರ್ಥ ತುಂಬುವಂತೆ, ಉಡುಪಿ
News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ

You cannot copy content of this page