October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕರ್ವೇಲು ನಿವಾಸಿ (ಮೂಲತಃ ಕಲ್ಲೇರಿ ಮನೆ) 32 ವರ್ಷ ಪ್ರಾಯದ ಇರ್ಫಾನ್ ಬಂಧಿತ ಆರೋಪಿ. ಈತ ಮಂಗಳೂರು-ವಿಟ್ಲ ಮಾರ್ಗವಾಗಿ ಸಂಚರಿಸುವ ‘ಸೆಲೆನ’ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

ಘಟನೆಯ ವಿವರ:

ಜುಲೈ 9ರಂದು ಸಂಜೆ ಸುಮಾರು 5:00 ಗಂಟೆಯ ವೇಳೆಗೆ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ಇರ್ಫಾನ್ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ಸನ್ನೆ ಮಾಡಿದ್ದಲ್ಲದೆ, ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ್ದಾನೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿನಿಯರನ್ನು ಬಸ್ಸಿನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ನೊಂದ ವಿದ್ಯಾರ್ಥಿನಿಯರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಜುಲೈ 10ರಂದು ಆರೋಪಿ ಇರ್ಫಾನ್‌ನನ್ನು ದಸ್ತಗಿರಿ (ಬಂಧನ) ಮಾಡಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page