July 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ KSRTC ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ – ಯುವತಿಯನ್ನು ಬೆನ್ನಟ್ಟಿ ಕೊಂದ ದುಷ್ಕರ್ಮಿ, ಆರೋಪಿ ಚೇತನ್ ಪರಾರಿ

ಇಲ್ಲಿನ KSRTC ಬಸ್ ನಿಲ್ದಾಣದಲ್ಲಿ ಇಂದು ಜುಲಾಯಿ 16ರಂದು ಗುರುವಾರ ಯುವತಿಯೊಬ್ಬಳ ಮೇಲೆ ಮಾರಕ ಆಯುಧದಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಂತಕ ಯುವತಿ ಸಂಬಂಧಿ ಚೇತನ್ ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಇವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ ಒಂದರಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಫೋನ್ ಕರೆಯಲ್ಲಿ ಆತಂಕ ಹಂಚಿಕೊಂಡಿದ್ದ ಲಾವಣ್ಯ:

ಪ್ರಾಥಮಿಕ ಮಾಹಿತಿ ಪ್ರಕಾರ, ಲಾವಣ್ಯ ಅವರು ಕೆಲಸ ಮುಗಿಸಿ ತಮ್ಮ ಊರಾದ ಕಕ್ಯಪದವು ಕಡೆಗೆ ತೆರಳಲು KSRTC ಬಸ್ ಹತ್ತಿ ಕುಳಿತಿದ್ದರು. ಈ ವೇಳೆ ತಮ್ಮ ಪಕ್ಕದಲ್ಲೇ ಅಪರಿಚಿತ ಯುವಕನೊಬ್ಬ ಬಂದು ಕುಳಿತಿದ್ದರಿಂದ ಆತಂಕಗೊಂಡ ಅವರು, ತಕ್ಷಣವೇ ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. “ನನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ಹೇಳುತ್ತಿರುವಾಗಲೇ ಇದ್ದಕ್ಕಿದ್ದಂತೆ ಕರೆ ಕಡಿತಗೊಂಡಿದೆ ಎನ್ನಲಾಗಿದೆ.

ಬೆನ್ನಟ್ಟಿ ಬಂದು ಮಾರಣಾಂತಿಕ ದಾಳಿ:

ಬಸ್‌ನಲ್ಲಿದ್ದ ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಪ್ರಕಾರ, ಫೋನ್ ಕರೆ ಕಡಿತಗೊಂಡ ಬೆನ್ನಲ್ಲೇ ಲಾವಣ್ಯ ಅವರು ಬಸ್‌ನಿಂದ ಕೆಳಗಿಳಿದಿದ್ದಾರೆ. ಇದನ್ನು ಗಮನಿಸಿದ ಯುವಕ ಕೂಡಲೇ ಆಕೆಯನ್ನು ಹಿಂಬಾಲಿಸಿಕೊಂಡು ಬಸ್‌ನಿಂದ ಇಳಿದಿದ್ದಾನೆ. ತಕ್ಷಣ ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದು ಆಕೆಯ ಮೇಲೆ ದಾಳಿಗೆ ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಪ್ರಾಣಭಯದಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ದುಷ್ಕರ್ಮಿ ಆಕೆಯನ್ನು ಬೆನ್ನಟ್ಟಿ ಹೋಗಿ ತೀವ್ರವಾಗಿ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಓಡಿ ಹೋಗಿದ್ದಾನೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು:

ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳದಲ್ಲೇ ನಡೆದ ಈ ಭೀಕರ ಕೊಲೆಯಿಂದಾಗಿ ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ಕೆಲಕಾಲ ತೀವ್ರ ಆತಂಕ ಮತ್ತು ಸಾರ್ವಜನಿಕ ವಲಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಸದ್ಯ ಪೊಲೀಸರು ಆರೋಪಿ ಚೇತನ್ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದಾರೆ.

You may also like

News

Father Muller Charitable Institutions Signs MoU with Avishkar Yoga & Holistic Health Center to Advance Holistic Healthcare, Research and Academic Excellence

In a significant step towards promoting holistic healthcare, wellness, research, and academic collaboration, Father Muller Charitable Institutions (FMCI) signed a
News

‘ಡ್ರಗ್ಸ್ ಫ್ರೀ ಮಂಗಳೂರು’ ಕಾರ್ಯಾಚರಣೆಗೆ ಮಹಾ ಯಶಸ್ಸು

₹5.20 ಕೋಟಿ ಮೌಲ್ಯದ 5.196 ಕೆಜಿ MDMA ಜಪ್ತಿ – ಬೆಳ್ತಂಗಡಿ ಮೂಲದ ಇಬ್ಬರ ಬಂಧನ ‘ಡ್ರಗ್ಸ್ ಫ್ರೀ ಮಂಗಳೂರು’ ಅಭಿಯಾನದ ಭಾಗವಾಗಿ ಮಂಗಳೂರು ನಗರ ಸಿಸಿಬಿ

You cannot copy content of this page