October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಯುವತಿಯ ಕೊಲೆ – ಆರೋಪಿಯ ಬಂಧನ ಬೆನ್ನಲ್ಲೇ ಹೈಡ್ರಾಮಾ; ಇಲಿ ಪಾಷಾಣ ಸೇವಿಸಿ ಆಸ್ಪತ್ರೆಗೆ ದಾಖಲು!

ನಿನ್ನೆ ಜುಲಾಯ್ 16ರಂದು ಗುರುವಾರ ನಡೆದಿದ್ದ ಪ್ರಮುಖ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಆರೋಪಿಯನ್ನು ವಶಕ್ಕೆ ಪಡೆಯುವಷ್ಟರಲ್ಲಿ ಆತ ಇಲಿ ಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡೆದಿದ್ದೇನು?

ನಿನ್ನೆ ಬಂಟ್ವಾಳದಲ್ಲಿ ನಡೆದ ತಲ್ಲಣ ಸೃಷ್ಟಿಸಿದ್ದ ಘಟನೆಯ ಬೆನ್ನತ್ತಿದ್ದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಕೊನೆಗೂ ಆರೋಪಿಯ ಸುಳಿವು ಪತ್ತೆ ಹಚ್ಚಿದ್ದರು. ಆದರೆ ಪೊಲೀಸ್ ಬಂಧನದ ಭೀತಿಯಿಂದ ಆರೋಪಿಯು ಇಲಿ ಪಾಷಾಣ ಸೇವಿಸಿದ್ದಾನೆ ಎನ್ನಲಾಗಿದೆ.  ಆರೋಪಿಯ ಆರೋಗ್ಯ ಸ್ಥಿತಿ ಹದಗೆಟ್ಟಿರುವುದನ್ನು ಗಮನಿಸಿದ ಪೊಲೀಸರು, ಆತನನ್ನು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ತುರ್ತು ತಪಾಸಣೆ ಮತ್ತು ಚಿಕಿತ್ಸೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಆರೋಪಿಯ ಆರೋಗ್ಯ ಪರಿಸ್ಥಿತಿ ಹಾಗೂ ಘಟನೆಗೆ ಸಂಬಂಧಿಸಿದ ಸಂಪೂರ್ಣ ತನಿಖೆಯ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page