August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌ಗಳಿಗೆ ಪೊಲೀಸ್ ಕಠಿಣ ಕ್ರಮ – 3 ಪ್ರತ್ಯೇಕ ಪ್ರಕರಣ ದಾಖಲು

3 ಪ್ರತ್ಯೇಕ ಪ್ರಕರಣ ದಾಖಲು

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ತಿರುಚಿದ ಹಾಗೂ ಸಮಾಜದ ಶಾಂತಿ ಕದಡುವ ರೀತಿಯ ಪೋಸ್ಟ್‌ಗಳನ್ನು ಪ್ರಸಾರ ಮಾಡಿದವರ ವಿರುದ್ಧ ಬಂಟ್ವಾಳ ನಗರ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಟಣೆಯ ಪ್ರಕಾರ, ಅಪರಾಧ ಸಂಖ್ಯೆ 95/2026ಕ್ಕೆ ಸಂಬಂಧಿಸಿದ ಆರೋಪಿಯ ಭಾವಚಿತ್ರವನ್ನು ಕೇಸರಿ ಶಾಲು, ಕುಂಕುಮ ಸೇರಿಸಿ ಭಜರಂಗದಳದ ಕಾರ್ಯಕರ್ತ ಎಂದು ತಿರುಚಿ, ಪ್ರಚೋದನಾತ್ಮಕ ಬರಹಗಳೊಂದಿಗೆ ವಿವಿಧ ವಾಟ್ಸ್ಆಪ್ ಗುಂಪುಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಲ್ಲಿ ಹರಿಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ 1) troll_master._Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroup ಗಳ ವಿರುದ್ಧ ಅಪರಾಧ ಸಂಖ್ಯೆ 96/2026ರಡಿ ಬಿಎನ್‌ಎಸ್-2023ರ ಕಲಂ 196 ಹಾಗೂ 353(2) ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಇದೇ ರೀತಿ, Shailaja Amarnath ಎಂಬ ಫೇಸ್‌ಬುಕ್ ಖಾತೆಯಲ್ಲಿ ಸಮಾಜದ ಶಾಂತಿ ಕದಡುವ ರೀತಿಯ ಸುಳ್ಳು ಪೋಸ್ಟ್ ಪ್ರಕಟಿಸಿದ ಆರೋಪದಡಿ ಅಪರಾಧ ಸಂಖ್ಯೆ 97/2026ರಡಿ ಪ್ರಕರಣ ದಾಖಲಾಗಿದೆ.

ಅಲ್ಲದೆ, Chethan Belchada ಎಂಬ ಫೇಸ್‌ಬುಕ್ ಖಾತೆಯಲ್ಲಿ ಆರೋಪಿಯ ಭಾವಚಿತ್ರವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಂತೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ಅಪರಾಧ ಸಂಖ್ಯೆ 98/2026ರಡಿ ಬಿಎನ್‌ಎಸ್-2023ರ ಕಲಂ 353(2) ಅನ್ವಯ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಬಂಟ್ವಾಳ ನಗರ ಪೊಲೀಸರು ಈ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ, ತಿರುಚಿದ ಚಿತ್ರಗಳು ಹಾಗೂ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page