August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ವಕೀಲರ ಸಂಘಕ್ಕೆ ನೂತನ ನಾಯಕತ್ವ – ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಕೆ. ಆಯ್ಕೆ

ಪುತ್ತೂರು ವಕೀಲರ ಸಂಘದ 2026–27 ಹಾಗೂ 2027–28ನೇ ಸಾಲಿನ ಎರಡು ವರ್ಷಗಳ ಅವಧಿಗೆ ಇಂದು ಜುಲಾಯಿ 23ರಂದು ಗುರುವಾರ ನಡೆದ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಕೆ. ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಕೆ. ಅವರು ಸ್ಪರ್ಧಿಸಿ ಬಹುಮತದೊಂದಿಗೆ ವಿಜಯ ಸಾಧಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇದೇ ವೇಳೆ ಸಂಘದ ಇತರೆ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದ್ದು, ಮಹಾಬಲ ಶೆಟ್ಟಿ ಕೊಮ್ಮಂಡ ಉಪಾಧ್ಯಕ್ಷರಾಗಿ, ಸ್ವಾತಿ ಜಗನ್ನಾಥ ರೈ ಕಾರ್ಯದರ್ಶಿಯಾಗಿ ಹಾಗೂ ಉದಯಚಂದ್ರ ಕರಂಬಾರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಎಸ್. ಪ್ರವೀಣ್ ಕುಮಾರ್, ಜಯಾನಂದ ಕೆ. ಹಾಗೂ ಮನೋಹರ್ ಎ. ಅವರು ಚುನಾವಣಾ ಅಧಿಕಾರಿಗಳಾಗಿ ಸುಸೂತ್ರವಾಗಿ ನಡೆಸಿಕೊಟ್ಟರು.

ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ವಕೀಲರು ಮತ್ತು ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿದ್ದು, ಸಂಘದ ಅಭಿವೃದ್ಧಿ, ಸದಸ್ಯರ ಹಿತಾಸಕ್ತಿ ಹಾಗೂ ನ್ಯಾಯಾಂಗ ಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ತಂಡ ಕಾರ್ಯನಿರ್ವಹಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page