October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ರಸ್ತೆ ಅಪಘಾತ ತಡೆಗೆ ಹೈಟೆಕ್ ಕಣ್ಣು – ಸಂಚಾರ ನಿಯಮ ಉಲ್ಲಂಘಿಸಿದರೆ ನೇರ ಮನೆಗೆ ನೋಟೀಸ್!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಹಾಗೂ ಸಂಚಾರ ನಿಯಮಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಅಪಘಾತ ಸಂಭವಿಸುವ ಪ್ರಮುಖ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಆಧುನಿಕ ತಂತ್ರಜ್ಞಾನದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, 2026 ಜುಲಾಯಿ 23ರಿಂದ ಇವು ಅಧಿಕೃತವಾಗಿ ಕಾರ್ಯಾಚರಣೆ ಆರಂಭಿಸಿವೆ.

ಪ್ರಮುಖ ಮುಖ್ಯಾಂಶಗಳು:

* ಯಾವೆಲ್ಲಾ ಠಾಣಾ ವ್ಯಾಪ್ತಿ?: ಮೊದಲ ಹಂತವಾಗಿ ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆ ಮತ್ತು ಜಂಕ್ಷನ್‌ಗಳಲ್ಲಿ ಈ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

* ಸಂಚಾರ ನಿಯಮ ಉಲ್ಲಂಘನೆಗೆ ದಂಡ: ಹೆಲ್ಮೆಟ್ ಧರಿಸದಿರುವುದು, ಅತಿ ವೇಗ ಚಾಲನೆ, ಸಿಗ್ನಲ್ ಜಂಪ್, ಸೀಟ್ ಬೆಲ್ಟ್ ಧರಿಸದಿರುವುದು ಸೇರಿದಂತೆ ಯಾವುದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೂ ಕ್ಯಾಮರಾದಲ್ಲಿ ದಾಖಲಾಗಲಿದೆ.

* ಆನ್‌ಲೈನ್ ನೋಟೀಸ್: ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರನ್ನು ಕ್ಯಾಮರಾ ದೃಶ್ಯಾವಳಿಗಳ ಮೂಲಕ ಪತ್ತೆಹಚ್ಚಿ, ಅವರ ಮನೆಗೆ ನೇರವಾಗಿ ದಂಡದ ನೋಟೀಸ್ ರವಾನಿಸಲಾಗುವುದು.

ಪೊಲೀಸ್ ಇಲಾಖೆಯ ಮನವಿ: ಚಾಲಕರು ಮತ್ತು ಸವಾರರು ತಮ್ಮ ಹಾಗೂ ಇತರರ ಸುರಕ್ಷತೆಯ ದೃಷ್ಟಿಯಿಂದ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಪಘಾತ ರಹಿತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page