August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಾವಣ್ಯ ಹತ್ಯೆ ಪ್ರಕರಣ – ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ!

ರಾಜ್ಯದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಬಿ.ಸಿ. ರೋಡ್‌ನ ಲಾವಣ್ಯ ಭೀಕರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಘಟನೆ ನಡೆದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್‌ನನ್ನು ಡಿಸ್ಚಾರ್ಜ್ ಮಾಡಿದ ಬೆನ್ನಲ್ಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಮತ್ತು ವಿವರ:

ಜುಲೈ 16ರಂದು ಬಿ.ಸಿ. ರೋಡ್ KSRTC ಬಸ್ ನಿಲ್ದಾಣದಲ್ಲಿ ಕಕ್ಯಪದವು ನಿವಾಸಿ ಲಾವಣ್ಯ ಅವರ ಮೇಲೆ ಏಕಮುಖ ಪ್ರೀತಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಭೀಕರ ದಾಳಿ ನಡೆಸಿ ಹತ್ಯೆಗೈದಿದ್ದ. ಕೃತ್ಯ ಎಸಗಿದ ಬಳಿಕ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಆತನನ್ನು, ಮರುದಿನ ಮಂಗಳೂರಿನ ಪಚ್ಚನಾಡಿ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಆ ಸಮಯದಲ್ಲಿ ಆರೋಪಿ ವಿಷಕಾರಿ ಪದಾರ್ಥ ಸೇವಿಸಿದ್ದನೆಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ, ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

11 ದಿನಗಳ ಚಿಕಿತ್ಸೆ ಹಾಗೂ ಬಂಧನ:

ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಆರೋಪಿಯ ಆರೋಗ್ಯ ಸ್ಥಿತಿ ಸುಧಾರಿಸಿದ ಕಾರಣ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಜುಲೈ 28ರಂದು ವೈದ್ಯರು ಆರೋಪಿಯ ಆರೋಗ್ಯ ಸ್ಥಿರವಾಗಿದೆ ಎಂದು ದೃಢಪಡಿಸಿ ಡಿಸ್ಚಾರ್ಜ್ ಮಾಡಿದ ಕೂಡಲೇ, ಬಂಟ್ವಾಳ ನಗರ ಪೊಲೀಸರು ಆತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆ ಹಾಗೂ ಕೊಲೆಗೆ ಬಳಸಿದ ವಸ್ತುಗಳ ಸಹಿತ ಇತರ ಪ್ರಮುಖ ಸಾಕ್ಷ್ಯಾಧಾರ ಸಂಗ್ರಹಕ್ಕಾಗಿ ಪೊಲೀಸರು ಸಲ್ಲಿಸಿದ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು, ಆರೋಪಿಯನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ತೀವ್ರಗೊಂಡ ತನಿಖೆ:

ಪ್ರಕರಣದ ವಿಚಾರಣೆಯನ್ನು ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ (ಐಪಿಎಸ್) ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದ ತನಿಖಾ ತಂಡ ನಡೆಸುತ್ತಿದ್ದು, ತನಿಖೆ ಈಗ ನಿರ್ಣಾಯಕ ಹಂತ ತಲುಪಿದೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page