August 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ – UUCMS ಪೋರ್ಟಲ್‌ನಲ್ಲಿ ಫಲಿತಾಂಶ ವೀಕ್ಷಣೆಗೆ ಅವಕಾಶ

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ – UUCMS ಪೋರ್ಟಲ್‌ನಲ್ಲಿ ಫಲಿತಾಂಶ ವೀಕ್ಷಣೆಗೆ ಅವಕಾಶ

ಮಂಗಳೂರು ವಿಶ್ವವಿದ್ಯಾನಿಲಯವು 2026ರ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನಡೆಸಿದ್ದ ವಿವಿಧ ಪದವಿ ಕೋರ್ಸ್‌ಗಳ 6ನೇ ಸೆಮಿಸ್ಟರ್ ಹಾಗೂ BHM ಕೋರ್ಸಿನ 8ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು UUCMS ಪೋರ್ಟಲ್ ಮೂಲಕ ಲಾಗಿನ್ ಆಗಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಇಂದು ಜುಲಾಯಿ 30ರಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

* ಉತ್ತೀರ್ಣರಾದ ವಿದ್ಯಾರ್ಥಿಗಳು: ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 17,347 ವಿದ್ಯಾರ್ಥಿಗಳ ಪೈಕಿ 17,076 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.

* ತಡೆಹಿಡಿಯಲಾದ ಫಲಿತಾಂಶ: ತಾಂತ್ರಿಕ ಕಾರಣಗಳಿಂದಾಗಿ 261 ವಿದ್ಯಾರ್ಥಿಗಳ ಫಲಿತಾಂಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

* ಶೀಘ್ರದಲ್ಲೇ ಉಳಿದ ಫಲಿತಾಂಶ: ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ಗಳ ಪದವಿ ಫಲಿತಾಂಶ ಹಾಗೂ Non-NEP ಕಾರ್ಯಕ್ರಮಗಳ ಪುನರಾವರ್ತಿತ (Repeater) ವಿದ್ಯಾರ್ಥಿಗಳ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

ಆನ್‌ಲೈನ್ ಟ್ಯಾಬ್ಯುಲೇಶನ್‌ನಿಂದ ಶೀಘ್ರ ಫಲಿತಾಂಶ:

ಈ ಬಾರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಟ್ಯಾಬ್ಯುಲೇಶನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಿ ಆನ್‌ಲೈನ್ ವ್ಯವಸ್ಥೆ ಅಳವಡಿಸಲಾಗಿತ್ತು. ಮೌಲ್ಯಮಾಪನ ನಡೆಯುತ್ತಿರುವಾಗಲೇ ಶೀಘ್ರವಾಗಿ ಫಲಿತಾಂಶ ಸಿದ್ಧಪಡಿಸಲು ಇದು ನೆರವಾಗಿದೆ. ಈ ಕಾರ್ಯಕ್ಕೆ ಪೂರ್ಣ ಸಹಕಾರ ನೀಡಿದ ಮೌಲ್ಯಮಾಪನ ಕೇಂದ್ರಗಳ ಕಸ್ಟೋಡಿಯನ್, ಸಂಯೋಜಕರು, ಪರೀಕ್ಷಾ ಮಂಡಳಿ ಅಧ್ಯಕ್ಷರು, ಮೌಲ್ಯಮಾಪಕರು ಹಾಗೂ ಪರೀಕ್ಷಾಂಗ ವಿಭಾಗದ ಸಿಬ್ಬಂದಿಗೆ ಕುಲಪತಿಗಳು ಧನ್ಯವಾದ ಅರ್ಪಿಸಿದ್ದಾರೆ.

ಮಾಪನಕ್ಕೆ ಅವಕಾಶ:

ಫಲಿತಾಂಶದಿಂದ ಅತೃಪ್ತರಾದ ಅಥವಾ ಅಂಕಗಳ ಮರುಮೌಲ್ಯಮಾಪನಕ್ಕೆ (Revaluation) ಬಯಸುವ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ UUCMS ಪೋರ್ಟಲ್‌ನಲ್ಲಿ ಅಧಿಕೃತ ಸೂಚನೆ ಹೊರಡಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕುಲಪತಿಯವರು ಸ್ಪಷ್ಟಪಡಿಸಿದ್ದಾರೆ.

 

 

You may also like

News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session
News

ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ – ಕೆಲವೇ ಗಂಟೆಗಳಲ್ಲಿ ಉಡುಪಿ ಪೊಲೀಸರಿಂದ ಆರೋಪಿ ರಾಜು ಬಂಧನ

ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ

You cannot copy content of this page