August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ಭಾರಿ ಪ್ರಮಾಣದ MDMA, ಗಾಂಜಾ ವಶ – ಪ್ರಮುಖ ಆರೋಪಿ ಬಂಧನ, ಮತ್ತೊಬ್ಬ ಪರಾರಿ!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಕುವೆಟ್ಟು ನಿವಾಸಿ 21 ವರ್ಷ ಪ್ರಾಯದ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಬಂಧಿತ ಆರೋಪಿ.

ಕಾರ್ಯಾಚರಣೆಯ ವಿವರ:

ದಿನಾಂಕ 29-07-2026 ರಂದು ರಾತ್ರಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ. ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಪಿಲಿಚಂಡಿಕಲ್ಲು ಬಳಿ ಆಟೋ ರಿಕ್ಷಾ (KA18 A 7203) ಬಳಿ ನಿಂತಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ವರ್ತಿಸುವುದು ಕಂಡುಬಂದಿದೆ. ತಕ್ಷಣ ಆತನನ್ನು ತಡೆದು ವಿಚಾರಣೆ ನಡೆಸಿ ತಪಾಸಣೆಗೊಳಪಡಿಸಿದಾಗ ಆತನ ಬಳಿ 27 ಗ್ರಾಂ ಗಾಂಜಾ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ. ಬಳಿಕ ಸ್ಥಳದಲ್ಲಿದ್ದ ರಿಕ್ಷಾ ಹಾಗೂ ಕಾರನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಸುಮಾರು 7,60,000 ರೂಪಾಯಿ ಮೌಲ್ಯದ 76.59 ಗ್ರಾಂ ತೂಕದ ನಿಷೇಧಿತ MDMA ಮಾದಕ ವಸ್ತು ಪತ್ತೆಯಾಗಿದೆ.

ಮತ್ತೊಬ್ಬ ಆರೋಪಿ ಪರಾರಿ:

ಬಂಧಿತ ಆರೋಪಿಗೆ ಮಾದಕ ವಸ್ತು ಪೂರೈಸಲು ಬಂದಿದ್ದ ಮತ್ತೊಬ್ಬ ಆರೋಪಿ ಅಮ್ಜತ್ ಖರಾರ್ ಎಂಬಾತನು ಪೊಲೀಸರು ಬರುತ್ತಿದ್ದಂತೆ ತಾನು ತಂದಿದ್ದ ಕಾರನ್ನು (KA21 MA 4990) ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ನ್ಯಾಯಾಂಗ ಬಂಧನ:

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ (ಅಕ್ರ 82/2026, ಕಲಂ: 8(c), 20(b)(ii)(A), 27A, 22(c)) ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page