October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೋನು ಮ್ಯಾಕ್ಲಿನ್ ನೊರೊನ್ಹಾಗೆ ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ, ಬೆದರಿಕೆ ಹಾಗೂ ಖಾಸಗಿ ಚಿತ್ರ ದುರುಪಯೋಗ ಪ್ರಕರಣದಲ್ಲಿ ಮಂಗಳೂರು ನ್ಯಾಯಾಲಯದ ತೀರ್ಪು

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ 20 ವರ್ಷ ಪ್ರಾಯದ ಸೋನು ಮ್ಯಾಕ್ಲಿನ್ ನೊರೊನ್ಹಾ ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಕಲಂಗಳಡಿ ದಂಡ ವಿಧಿಸಿದೆ.

ಆರೋಪಿ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ಮನವೊಲಿಸಿ, ಮಂಗಳೂರು ಶಕ್ತಿನಗರ ಹಾಗೂ ಅಳಪೆ ಗ್ರಾಮದ ವಿವಿಧ ಸ್ಥಳಗಳಲ್ಲಿ 2024ರ ಸೆಪ್ಟೆಂಬರ್‌ನಿಂದ 2025ರ ಜೂನ್‌ವರೆಗೆ ಪದೇ ಪದೇ ಅತ್ಯಾಚಾರ ಎಸಗಿದ್ದನು. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೊ ಕರೆ ಮೂಲಕ ನಗ್ನ ಚಿತ್ರಗಳನ್ನು ಸೆರೆಹಿಡಿದು, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬಾಲಕಿ, ಆಕೆಯ ತಾಯಿ ಹಾಗೂ ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದನು.

ಪ್ರಕರಣದ ತನಿಖೆಯನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಟಿ.ಡಿ. ನಾಗರಾಜ್ ಅವರು ನಡೆಸಿ, ಪ್ರಬಲ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.

ನ್ಯಾಯಾಲಯವು ಆರೋಪಿಗೆ ಪೋಕ್ಸೋ ಕಾಯ್ದೆಯ ಕಲಂ 6 ಹಾಗೂ ಬಿಎನ್‌ಎಸ್ ಕಲಂ 64(2)(m) ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ. ಜೊತೆಗೆ ಬಿಎನ್‌ಎಸ್ ಕಲಂ 77, ಪೋಕ್ಸೋ ಕಲಂ 15 ಹಾಗೂ ಐಟಿ ಕಾಯ್ದೆ 66(E) ಅಡಿಯಲ್ಲಿ ತಲಾ ಒಂದು ವರ್ಷದ ಕಾರಾಗೃಹ ಶಿಕ್ಷೆ ಮತ್ತು ₹5,000 ದಂಡ ವಿಧಿಸಿ ತೀರ್ಪು ನೀಡಿದೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page