August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೋಗಿಬೆಟ್ಟು ರಸ್ತೆಯಲ್ಲಿ ಕೃತಕ ನೆರೆ – ಜನರ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಆಗಸ್ಟ್ 3ರಂದು ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಗಡಿಯಾರ–ಜೋಗಿಬೆಟ್ಟು ರಸ್ತೆಯಲ್ಲಿ ಮಳೆನೀರು ರಸ್ತೆಯಲ್ಲೇ ನಿಂತು ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಇತ್ತೀಚೆಗೆ ಈ ಭಾಗದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದ್ದರೂ, ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸದಿರುವುದರಿಂದ ಪ್ರತಿ ಮಳೆಯ ಸಂದರ್ಭದಲ್ಲೂ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದೆ. ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತವಾಗುವುದರ ಜೊತೆಗೆ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಅಪಾಯದ ನಡುವೆ ಸಂಚರಿಸುವಂತಾಗಿದೆ.

ಜೋಗಿಬೆಟ್ಟು ರಸ್ತೆ ಪಾಟ್ರಕೋಡಿ ಹಾಗೂ ಮಿತ್ತೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಅನೇಕ ಮನೆಗಳು ಹಾಗೂ ವ್ಯಾಪಾರ ಮಳಿಗೆಗಳಿವೆ. ನೀರು ನಿಂತಿರುವ ಕಾರಣ ಸ್ಥಳೀಯರ ದೈನಂದಿನ ಓಡಾಟಕ್ಕೂ ತೊಂದರೆ ಉಂಟಾಗಿದ್ದು, ವ್ಯಾಪಾರ ವಹಿವಾಟಿನ ಮೇಲೂ ಪರಿಣಾಮ ಬೀರುತ್ತಿದೆ.

ಪ್ರತಿ ಮಳೆಗಾಲದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಾತ್ಕಾಲಿಕ ಕ್ರಮಗಳಿಗೆ ಸೀಮಿತವಾಗದೆ, ಸಮರ್ಪಕ ಚರಂಡಿ ನಿರ್ಮಿಸಿ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸಮಸ್ಯೆ ಗಂಭೀರವಾಗುವ ಮುನ್ನವೇ ತುರ್ತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page