August 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ಸಂಘಗಳು, ಆಡ್-ಆನ್ ಕೋರ್ಸ್‌ಗಳಿಗೆ ಚಾಲನೆ

ಮಂಗಳೂರು ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ವಿವಿಧ ವಿದ್ಯಾರ್ಥಿ ಸಂಘಗಳು ಹಾಗೂ ಆಡ್-ಆನ್ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ ನಾಯಕತ್ವ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಂಘಟನಾ ಕೌಶಲ್ಯ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ವೃದ್ಧಿಯಾಗುತ್ತದೆ. ಸಮಾಜದತ್ತ ಜವಾಬ್ದಾರಿಯುತ ನಿಲುವು ಬೆಳೆಸಿಕೊಳ್ಳುವುದು ಇಂದಿನ ಯುವಜನರ ಪ್ರಮುಖ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿ ಹಾಗೂ ಮಿಲಾಗ್ರಿಸ್ ಚರ್ಚ್ ಇದರ ಪ್ರಧಾನ ಧರ್ಮಗುರು ವಂದನೀಯ ಐವನ್ ಮೈಕಲ್ ರೊಡ್ರಿಗಸ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ಆಡ್-ಆನ್ ಕೋರ್ಸ್‌ಗಳು ಪ್ರಮುಖ ಪಾತ್ರವಹಿಸುತ್ತವೆ. ಪಠ್ಯಕ್ರಮದೊಂದಿಗೆ ಕೌಶಲ್ಯಾಧಾರಿತ ಶಿಕ್ಷಣವನ್ನು ಅಳವಡಿಸಿಕೊಳ್ಳುವುದರಿಂದ ಭವಿಷ್ಯದ ಉದ್ಯೋಗಾವಕಾಶಗಳಿಗೆ ವಿದ್ಯಾರ್ಥಿಗಳು ಸಮರ್ಥವಾಗಿ ಸಜ್ಜಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಹಾಗೂ ಕ್ಯಾಂಪಸ್ ನಿರ್ದೇಶಕರಾದ ವಂದನೀಯ ಆಲ್ವಿನ್ ಸೆರಾವೊ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಪರಿಷತ್ ಇದರ ಉಪಾಧ್ಯಕ್ಷ ಡಿಕ್ಸನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ವಂದನೀಯ ಉದಯ್ ಫೆರ್ನಾಂಡಿಸ್, ಐಕ್ಯೂಎಸಿ ಸಂಯೋಜಕಿ ಚೇತನಾ, ಎನ್‌ಸಿಸಿ ಅಧಿಕಾರಿ ಲೆ. ಡೆನ್ಜಿಲ್ ಎಡ್ರೋಡ್ ಪಿಂಟೊ, ಆಡ್-ಆನ್ ಕೋರ್ಸ್ ಸಂಯೋಜಕಿ ಹರ್ಷಾ, ಸಂಘಗಳ ಸಂಯೋಜಕಿ ಮಂಜುಷಾ, ವಿವಿಧ ಸಂಪನ್ಮೂಲ ವ್ಯಕ್ತಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ವಿಯೋಲ್ ರೆನ್ವಿಲ್ ಮೊಂತೇರೊ ಸ್ವಾಗತಿಸಿದರು. ಫಾತಿಮಾ ಫರಾನ ವಂದಿಸಿದರು. ಪ್ರಿನ್ಸೆಲ್ ಕಾರ್ಯಕ್ರಮ ನಿರೂಪಿಸಿದರು.

 

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page