October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ಪರ್ಯಾಯ ದಿನ ನೀರು ಪೂರೈಕೆ – ಆಗಸ್ಟ್‌ 31ರವರೆಗೆ ತಾತ್ಕಾಲಿಕ ವ್ಯವಸ್ಥೆ

ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಮಳೆನೀರಿನೊಂದಿಗೆ ಮರದ ದಿಮ್ಮಿಗಳು, ಕೊಂಬೆಗಳು, ಪ್ಲಾಸ್ಟಿಕ್‌ ತ್ಯಾಜ್ಯ, ಬಟ್ಟೆ, ಚೀಲಗಳು, ಹೂಳು ಸೇರಿದಂತೆ ವಿವಿಧ ತ್ಯಾಜ್ಯಗಳು ಸಂಗ್ರಹಗೊಂಡ ಪರಿಣಾಮ ನೀರು ಪಂಪಿಂಗ್‌ ವ್ಯವಸ್ಥೆಗೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನದಿಯ ನೀರಿನ ಹರಿವು ಹೆಚ್ಚಾಗಿದ್ದು, ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹಗೊಂಡಿದೆ. ಇದರಿಂದ ಪಂಪ್‌ನ ಸ್ಕ್ರೀನ್‌ ಹಾನಿಗೊಂಡು ಮುಚ್ಚಿಹೋಗಿರುವ ಪರಿಣಾಮ ಪಂಪಿಂಗ್‌ ಸಾಮರ್ಥ್ಯ ಕಡಿಮೆಯಾಗಿದೆ.

ಹಾನಿಗೊಂಡಿರುವ ಸ್ಕ್ರೀನ್‌ ದುರಸ್ತಿ ಹಾಗೂ ಇನ್‌ಟೇಕ್‌ ಭಾಗದಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯ ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಪಂಪಿಂಗ್‌ ವ್ಯವಸ್ಥೆಯನ್ನು ಪೂರ್ಣ ಸಾಮರ್ಥ್ಯಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಪೂರ್ಣ ಸಾಮರ್ಥ್ಯದಲ್ಲಿ ನೀರು ಪಂಪ್‌ ಮಾಡುವುದು ಕಷ್ಟವಾಗಲಿದೆ ಎಂದು ಪಾಲಿಕೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸುರತ್ಕಲ್‌ ಪ್ರದೇಶದ ವಾರ್ಡ್‌ಗಳು ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಲೋ-ಲೆವೆಲ್‌ ವಾರ್ಡ್‌ಗಳಿಗೆ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ ಮಾಡುವ ತಾತ್ಕಾಲಿಕ ವ್ಯವಸ್ಥೆಯನ್ನು 2026 ಆಗಸ್ಟ್‌ 31 ರವರೆಗೆ ಮುಂದುವರಿಸಲಾಗುವುದು.

ನೀರಿನ ಪೂರೈಕೆಯಲ್ಲಿ ಉಂಟಾಗುವ ಬದಲಾವಣೆಯನ್ನು ಸಾರ್ವಜನಿಕರು ಅರ್ಥಮಾಡಿಕೊಂಡು ಸಹಕರಿಸುವಂತೆ ಮನವಿ ಮಾಡಿರುವ ಪಾಲಿಕೆ, ನೀರನ್ನು ಮಿತವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page