September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಜಾರಿನಲ್ಲಿ ಸಿಲಿಂಡರ್ ಸ್ಫೋಟ – ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ

ಮೂಡುಬಿದಿರೆಯ ಮಿಜಾರ್ ಸಮೀಪ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಆಗಸ್ಟ್ 11ರಂದು ಮಂಗಳವಾರ ಬೆಳಗ್ಗೆ ನಡೆದಿದೆ. ಮಿಜಾರ್ ಸಮೀಪ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ಸಂಭವಿಸಿದೆ.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 31 ವರ್ಷ ಪ್ರಾಯದ ಶಿವರಾಮ, ಅವರ ಪತ್ನಿ 25 ವರ್ಷ ಪ್ರಾಯದ ಗಂಗಾ ಹಾಗೂ ಅವರ ಪುತ್ರ 6 ವರ್ಷ ಪ್ರಾಯದ ಆದರ್ಶ್ ಸಿಲಿಂಡರ್ ಸ್ಫೋಟದಿಂದ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಶಿವರಾಮ ಅವರು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿದ್ದು, ಸ್ಫೋಟದಲ್ಲಿ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರ ಪತ್ನಿ ಹಾಗೂ ಪುತ್ರನಿಗೂ ಸುಟ್ಟ ಗಾಯಗಳಾಗಿವೆ. ಸಿಲಿಂಡರ್ ಸ್ಫೋಟದ ಪರಿಣಾಮ ಮನೆಯೊಳಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವ ಕ್ರಮ ಕೈಗೊಳ್ಳಲಾಗಿದೆ.

ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ

You cannot copy content of this page