October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದಾನೆ ಚರ್ಚ್ ವ್ಯಾಪ್ತಿಯ ಕಡುಪು ಪಂಜಿರೆಲ್‌ ನಿವಾಸಿ ಆಲಿಯಾ ಫೆರ್ನಾಂಡಿಸ್ ನಿಧನ

ಮಂಗಳೂರಿನ ಕಡುಪು ಪಂಜಿರೆಲ್ ನಿವಾಸಿ ಅಲ್ಫೋನ್ಸ್ ಫೆರ್ನಾಂಡಿಸ್ ಮತ್ತು ರೆನ್ನಿ ಮೊಂತೇರೊ ದಂಪತಿಯ ಪುತ್ರಿ 38 ವರ್ಷ ಪ್ರಾಯದ ಆಲಿಯಾ ಫೆರ್ನಾಂಡಿಸ್ ಅವರು ಇಂದು ಆಗಸ್ಟ್ 11ರಂದು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 18 ವರ್ಷಗಳಿಂದ ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಆಲಿಯಾ ಅವರು, ಅಪಾರ ಧೈರ್ಯ ಮತ್ತು ಸಹನೆಯಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದರು. ಇಂದು ಅಲ್ಪಕಾಲದ ಅಸೌಖ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಪಾಲ್ಡಾನೆ ಚರ್ಚ್ ವ್ಯಾಪ್ತಿಗೆ ಒಳಪಟ್ಟ ಮೃತರು, ತಂದೆ, ತಾಯಿ ಹಾಗೂ ಓರ್ವ ಸಹೋದರ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. 38ರ ಹರಯದಲ್ಲೇ ಸುದೀರ್ಘ ಕಾಲದ ನೋವನ್ನು ಅನುಭವಿಸಿ ವಿದಾಯ ಹೇಳಿದ ಆಲಿಯಾ ಅವರ ನಿಧನಕ್ಕೆ ಪಾಲ್ಡಾನೆ ಚರ್ಚ್ ಧರ್ಮಗುರು ವಂದನೀಯ ರಿಚರ್ಡ್ ಕುವೆಲ್ಲೊ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ, ಆಯೋಗಗಳ ಸಂಯೋಜಕರು, ಭಕ್ತಾಧಿಗಳು ಹಾಗೂ ಪಂಜಿರೆಲ್ ಗ್ರಾಮಸ್ಥರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ನಿತ್ಯ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

You may also like

News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು
News

Father Muller Thumbay Campus welcomes Nursing & Allied Health Students

The Course Inauguration Ceremony of the 5th batch of B.Sc. Nursing of Father Muller Nursing College Thumbay (FMNCT) and the

You cannot copy content of this page