October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

18 ವರ್ಷಗಳ ಹಳೆಯ ಕಳವು ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ

ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಆರೋಪಿಯನ್ನು 46 ವರ್ಷ ಪ್ರಾಯದ ಮಹಮ್ಮದ್ ಶರೀಪ್ ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ವೇಣೂರು ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ (ಅಕ್ರ 71/2008, ಕಲಂ: 457, 380 ಐಪಿಸಿ) ಸಂಬಂಧಿಸಿದಂತೆ ಈತ ಆರೋಪಿಯಾಗಿದ್ದ. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ನಿರಂತರವಾಗಿ ತಲೆಮರೆಸಿಕೊಂಡಿದ್ದರಿಂದ, ಮಾನ್ಯ ನ್ಯಾಯಾಲಯವು ಈತನ ವಿರುದ್ಧ ಸಿ.ಸಿ. ಸಂಖ್ಯೆ: 535/2016 ರಂತೆ ಜಾಮೀನು ರಹಿತ ವಾರಂಟ್ (NBW) ಹೊರಡಿಸಿತ್ತು.

 

ಪೊಲೀಸ್ ಕಾರ್ಯಾಚರಣೆ:

ಆರೋಪಿಯ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಗುರುವಾರ ವೇಣೂರು ಠಾಣಾ ಸಿಬ್ಬಂದಿಗಳಾದ PSI ಬೆಣ್ಣಿಚನ್, PC ಬಸವರಾಜ್ ಹಾಗೂ ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್. ಅವರನ್ನೊಳಗೊಂಡ ಪೊಲೀಸ್ ತಂಡವು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

You may also like

News

ಆಲ್ಬರ್ಟ್ ರೇಗೊ ಸಾವು ನಿಗೂಢ – ಎರಡು ತಿಂಗಳ ಬಳಿಕ ಶವ ಹೊರತೆಗೆದು FSL ಪರೀಕ್ಷೆ!

ಮಂಗಳೂರಿನಲ್ಲಿ ಅಪರೂಪದ ಪ್ರಕರಣ – ಮಗಳ ವಿರುದ್ಧ ದೂರು, ದೆರೆಬೈಲ್ ಚರ್ಚ್ ಆವರಣದ ದಫನಭೂಮಿಯಲ್ಲಿ ಪೊಲೀಸ್ ತನಿಖೆ ಮಂಗಳೂರು : ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು,
News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು

You cannot copy content of this page