September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಉಮೇಶ್ ಬಂಧನ

ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

 

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದಾಗ ಅಲ್ಲಿಗೂ ಬಂದ ಆರೋಪಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಿಎನ್‌ಎಸ್‌ನ ಸಂಬಂಧಿತ ಕಲಂಗಳ ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ವಿಟ್ಲ ಕೊಂಡಗಾಯಿ ನಿವಾಸಿ 53 ವರ್ಷ ಪ್ರಾಯದ ಉಮೇಶ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page