October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

9 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಶಬೀರ್ ಕೊನೆಗೂ ಬಂಧನ!

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುಂಜಾಲಕಟ್ಟೆ ಠಾಣೆಯ ಅಕ್ರ. 156/2016, ಐಪಿಸಿ ಸೆಕ್ಷನ್ 379 ಹಾಗೂ MMRD ಕಾಯ್ದೆಯ ಸೆಕ್ಷನ್ 42, 42, 44 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ 1023 ರಾಜೇಶ್, ಕಾನ್‌ಸ್ಟೆಬಲ್ 2276 ಚೋಳಪ್ಪ ಸಂಶಿ ಹಾಗೂ ಕಾನ್‌ಸ್ಟೆಬಲ್ 2524 ನಾಗರಾಜ್ ಅವರು ಚಿಕ್ಕಮಗಳೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಆಗಸ್ಟ್ 22ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸುಮಾರು ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

You may also like

News

ನೈನಾಡಿನಲ್ಲಿ ಪಾದುವಾ ಕಾಲೇಜಿನ 7 ದಿನಗಳ NSS ಶಿಬಿರಕ್ಕೆ ಚಾಲನೆ

“ಸೇವೆಯ ಮೂಲಕ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಕಲಿಯುತ್ತಾರೆ” –  ಫಾದರ್ ಅರುಣ್ ವಿಲ್ಸನ್ ಲೋಬೊ ಪಾದುವಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಏಳು
News

ಕ್ಷಿಪಣಿ ದಾಳಿ ಬೆನ್ನಲ್ಲೇ ಸೌದಿಯಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ

‘ಸುರಕ್ಷಿತ ಸ್ಥಳದಲ್ಲಿರಿ, ದೃಢೀಕರಿಸದ ವಿಡಿಯೋ–ಸುದ್ದಿ ಹಂಚಿಕೊಳ್ಳಬೇಡಿ’ ಎಂದು ರಾಯಭಾರ ಕಚೇರಿ ಸೂಚನೆ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಯೆಮೆನ್‌ನ

You cannot copy content of this page