September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಿರಿಯ ವಕೀಲ, ಪುತ್ತೂರು ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಎನ್. ಸುಬ್ರಹ್ಮಣ್ಯ ಕೊಳತ್ತಾಯ ನಿಧನ

ಪುತ್ತೂರು ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷರು, ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ವಕೀಲ 93 ವರ್ಷ ಪ್ರಾಯದ ಎನ್. ಸುಬ್ರಹ್ಮಣ್ಯ ಕೊಳತ್ತಾಯ ಅವರು ಇಂದು ಆಗಸ್ಟ್ 22ರಂದು ಶನಿವಾರ ರಾತ್ರಿ ನಿಧನರಾದರು. ಕರ್ಮಲ ನಿವಾಸಿಯಾಗಿದ್ದ ಎನ್. ಸುಬ್ರಹ್ಮಣ್ಯ ಕೊಳತ್ತಾಯ ಅವರು ಪುತ್ತೂರಿನ ವಿವಿಧ ಸಾಮಾಜಿಕ ಹಾಗೂ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಾಜ ಸೇವೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಹಿರಿಯ ವಕೀಲರಾಗಿ ಹಾಗೂ ವಿವಿಧ ಸಂಸ್ಥೆಗಳ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವ ಮೂಲಕ ಪುತ್ತೂರಿನ ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹವಾಗಿ ಗುರುತಿಸಿಕೊಂಡಿದ್ದರು.

ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಪುತ್ತೂರು ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪುತ್ರರಾದ ಕಾವೇರಿ ರೆಫ್ರಿಜರೇಟರ್ ಸಂಸ್ಥೆಯ ಮಾಲಕ ಶ್ರೀಕಾಂತ್ ಕೊಳತ್ತಾಯ, ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕೊಳತ್ತಾಯ ಹಾಗೂ ಅಮೆರಿಕಾದಲ್ಲಿರುವ ಸೂರಜ್ ಕೊಳತ್ತಾಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪುತ್ತೂರು ಬೊಳುವಾರಿನ ಕಜೆ ಲಾ ಚೇಂಬರ್ಸ್‌ನ ವಕೀಲರಾದ ಮಹೇಶ್ ಕಜೆ ಅವರು ಎನ್. ಸುಬ್ರಹ್ಮಣ್ಯ ಕೊಳತ್ತಾಯ ಅವರ ಜೂನಿಯರ್ ವಕೀಲರಾಗಿದ್ದರು. ತಮ್ಮ ಹಿರಿಯ ವಕೀಲರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾನೂನು ಕ್ಷೇತ್ರದಲ್ಲಿ ತಮ್ಮ ಹಿರಿಯರಾದ ಎನ್. ಸುಬ್ರಹ್ಮಣ್ಯ ಕೊಳತ್ತಾಯ ಅವರ ಮಾರ್ಗದರ್ಶನ ಹಾಗೂ ಸೇವೆಯನ್ನು ಸ್ಮರಿಸಿರುವ ಮಹೇಶ್ ಕಜೆ ಅವರು, ಅವರ ಅಗಲಿಕೆ ವೈಯಕ್ತಿಕವಾಗಿ ತಮಗೆ ಮಾತ್ರವಲ್ಲದೆ ಕಾನೂನು ಕ್ಷೇತ್ರ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಕರ್ಮಲ ನಿವಾಸದಲ್ಲಿ ನಾಳೆ ಆಗಸ್ಟ್ 23ರಂದು ಭಾನುವಾರ ಬೆಳಗ್ಗೆ ಸುಮಾರು 10 ಗಂಟೆಯವರೆಗೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಂಧುಗಳು, ಸ್ನೇಹಿತರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಬಹುದು.

You may also like

News

Father Muller Celebrates National Nutrition Week 2026

Nourishing Lives Through Healthy Choices National Nutrition Week 2026 was observed with the theme “Nourishing Lives Through Healthy Choices” through
News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ

You cannot copy content of this page