ವರ್ಗೀಯ ವೈಮನಸ್ಸಿಗೆ ಪ್ರಚೋದನೆ – ವಾಟ್ಸಾಪ್ ಗ್ರೂಪ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದ ವ್ಯಕ್ತಿಯ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲು
ಸಾರ್ವಜನಿಕ ಶಾಂತಿ ಕದಡುವ ಹಾಗೂ ಧಾರ್ಮಿಕ ವೈಮನಸ್ಸು ಸೃಷ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿಬಿಟ್ಟು ಬಂದ್‌ಗೆ ಕರೆ ನೀಡಿದ್ದ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇತ್ತೀಚೆಗೆ ಪುತ್ತೂರಿನ ದರ್ಬೆಯಲ್ಲಿರುವ ಅಂಗಡಿಯೊಂದರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ದಿನೇಶ್ ಪಂಜಿಗ’ ಎಂಬ ವಾಟ್ಸಾಪ್ ಖಾತೆದಾರನು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುವಂತಹ ವದಂತಿಗಳನ್ನು ಪ್ರಸಾರ ಮಾಡಿದ್ದ ಎನ್ನಲಾಗಿದೆ. ಅಲ್ಲದೆ, ಜನರನ್ನು ಅಕ್ರಮವಾಗಿ ಗುಂಪುಗೂಡಿಸಿ ಕಾನೂನುಬಾಹಿರ ಕೃತ್ಯ ಎಸಗಲು ದುಷ್ಪ್ರೇರಣೆ ನೀಡಿ, ಬಂದ್‌ಗೆ ಆಹ್ವಾನ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸರು, ಆರೋಪಿ ದಿನೇಶ್ ಪಂಜಿಗ ಎಂಬಾತನ ವಿರುದ್ಧ ಅಪರಾಧ ಸಂಖ್ಯೆ: 100/2026 ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 353(2), 57 ಹಾಗೂ 189 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೆತ್ತಿಕೊಂಡಿದ್ದಾರೆ.



