September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂರು ಜಾನುವಾರುಗಳ ರಕ್ಷಣೆ, ವಾಹನ ಸಹಿತ ಆರೋಪಿ ವಶಕ್ಕೆ

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣೆ ಪೊಲೀಸರು ತಡೆದು ಪರಿಶೀಲಿಸಿ, ವಾಹನದಲ್ಲಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ದೊರೆತಿತ್ತು. ಮಾಹಿತಿ ಆಧರಿಸಿ ಅವರು ಸಿಬ್ಬಂದಿಯೊಂದಿಗೆ ಜಿಡೆಕಲ್ಲು ಬಳಿ ಕಾರ್ಯಾಚರಣೆ ನಡೆಸಿ, KA 19 D 0948 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್ ಅವರನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿ, ಯಾವುದೇ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಾನುವಾರುಗಳನ್ನು ಹಾಗೂ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯನ್ನು ಕೂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ .ಕ್ರ. 101/2026, ಪ್ರಾಣಿ ಹಿಂಸಾ ಕಾಯ್ದೆಯ ಕಲಂ 11(D) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 5, 12, ಜೊತೆಗೆ IMV Act ಕಲಂ 66 R/w 192(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ

You cannot copy content of this page