September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ ಚರ್ಚುಗಳು ಮತ್ತು ಸಮುದಾಯಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸಲ್ಲಿಸಿತು.ಸಭೆಯಲ್ಲಿ ಕರ್ನಾಟಕದಲ್ಲಿ 48 ಲಕ್ಷಕ್ಕೂ ಅಧಿಕ ಕ್ರೈಸ್ತರು ವಾಸಿಸುತ್ತಿದ್ದು, ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿಗಳು ಸೇರಿದಂತೆ ವಿವಿಧ ಸಂಬಂಧಿತ ಸರ್ಕಾರಿ ಸಂಸ್ಥೆಗಳಲ್ಲಿ ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ ಸಮುದಾಯಗಳಿಗೆ ಸಮರ್ಪಕ ಮತ್ತು ನ್ಯಾಯಸಮ್ಮತ ಪ್ರಾತಿನಿಧ್ಯ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು.

DAPC ನಿಯೋಗದ ಮನವಿಯನ್ನು ಸೌಹಾರ್ದಯುತವಾಗಿ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಿಯೋಗದೊಂದಿಗೆ ಶೀಘ್ರದಲ್ಲೇ ಪ್ರತ್ಯೇಕವಾಗಿ ಹಾಗೂ ವಿವರವಾದ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಸಮುದಾಯದ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಸಮಗ್ರವಾಗಿ ಆಲಿಸಿ, ಸೂಕ್ತ ಕ್ರಮಗಳ ಕುರಿತು ಚರ್ಚಿಸುವುದಾಗಿ ತಿಳಿಸಿದರು. ನಿಯೋಗವನ್ನು DAPC ಆರ್ಚ್‌ಬಿಷಪ್ ಡಾ. ವಿನೋದ್ ಎಂ. ಚಾಕೋ, ಸಹಾಯಕ ಆರ್ಚ್‌ಬಿಷಪ್ ರೆವರೆಂಡ್ ಸುನಿಲ್ ವಿ. ಜೇಕಬ್, ಸೈನಡ್ ಕಾರ್ಯದರ್ಶಿ ರೆವರೆಂಡ್ ವೆನಿಯಲ್ ಮೋಸಸ್ ಹಾಗೂ ನಿರ್ದೇಶಕರು ಮತ್ತು ಸಲಹೆಗಾರರಾದ ಪಾಸ್ಟರ್ ಕದಂ ಅವರು ಮುನ್ನಡೆಸಿದರು.

ಪುತ್ತೂರ್ದ ಮುತ್ತುಖ್ಯಾತಿಯ ಶಾಸಕ ಅಶೋಕ್ ರೈ ಭೇಟಿ:

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ನಿವಾಸದಲ್ಲಿ ಅಧಿಕೃತ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಪುತ್ತೂರ್ದ ಮುತ್ತುಖ್ಯಾತಿಯ ಪುತ್ತೂರು ಶಾಸಕರಾದ ಅಶೋಕ್ ರೈ ಅವರನ್ನು DAPC ಬಿಷಪ್‌ಗಳು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವೇಳೆ ಶಾಸಕರೊಂದಿಗೆ ವಿವಿಧ ವಿಚಾರಗಳ ಕುರಿತು ಆತ್ಮೀಯವಾಗಿ ಚರ್ಚಿಸಿದ DAPC ನಿಯೋಗಕ್ಕೆ, ತಮ್ಮ ಕಚೇರಿಗೆ ಭೇಟಿ ನೀಡುವಂತೆ ಶಾಸಕ ಅಶೋಕ್ ರೈ ಅವರು ಆಹ್ವಾನ ನೀಡಿದರು.

ಕರ್ನಾಟಕದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ ಸಮುದಾಯಗಳ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ DAPC ತನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದೆ.

 

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page