September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮವು ದೆ ಮರ್ಸಿದೆ ಅನಾಥಾಶ್ರಮ ಪಾಣೀರ್, ದೇರಳಕಟ್ಟೆಯಲ್ಲಿ ನಡೆಯಿತು.

ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಮುಖ್ಯಸ್ಥರಾದ ಜೋರ್ಜ್ ಫೆರ್ನಾಂಡಿಸ್ ಅವರ ನೇತೃತ್ವದಲ್ಲಿ ವಿವಿಧ ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಖ್ಯಾತ ನಿರೂಪಕ ವಿಜೆ ಮಧುರಾಜ್ ಗುರುಪುರ ಮಾತನಾಡಿ, ಪ್ರತಿವರ್ಷ ವಿವಿಧ ಆಶ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುವುದು ಸುಲಭದ ಮಾತಲ್ಲ. ಸೈಂಟ್ ಮಿಲಾಗ್ರಿಸ್ ಸಂಸ್ಥೆ ಈ ಸೇವಾ ಕಾರ್ಯದ ಮೂಲಕ ಉತ್ತಮ ಮಾದರಿಯನ್ನು ತೋರಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ದೆ ಮರ್ಸಿದೆ ಅನಾಥಾಶ್ರಮದ ನಿರ್ದೇಶಕಿ ಭಗಿನಿ ಲೂಸಿಯಾನಾ ಪಿಂಟೊ, ಅವಿಷ್ಕಾರ್ ಯೋಗದ ಮುಖ್ಯಸ್ಥ ಕುಶಾಲಪ್ಪ ಗೌಡ, ಮಾಜಿ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಎಂ. ಕಿಶೋರ್ ಕುಮಾರ್, ಮಿಲಾಗ್ರಿಸ್ ಸಂಸ್ಥೆಯ ಮಂಗಳೂರು–ಪುತ್ತೂರು ವಿಭಾಗದ ಅಭಿವೃದ್ಧಿ ಅಧಿಕಾರಿ ನಾಗರಾಜ್ ಮಡಿವಾಳ್, ಮಂಗಳೂರು ವಿಭಾಗದ ರಿಕವರಿ ಆಫೀಸರ್ ವಿಷ್ಣು ಸಿ.ಕೆ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಉರ್ವಾ ಶಾಖಾ ವ್ಯವಸ್ಥಾಪಕ ಮೆಲ್ ರೋಯ್ ಪ್ರೇಮ್ ಡಿಸೋಜ ಸ್ವಾಗತಿಸಿದರು. ತೊಕ್ಕೊಟ್ಟು ಶಾಖಾ ವ್ಯವಸ್ಥಾಪಕ ಅಮಿತ್ ಶೆಟ್ಟಿ ಕೆ. ವಂದಿಸಿದರು. ಉರ್ವಾ ಶಾಖೆಯ ಸಿಬ್ಬಂದಿ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ
News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion

You cannot copy content of this page