September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ” ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಆಗಸ್ಟ್ 25ರಂದು ಮಂಗಳವಾರ ಮಂಗಳೂರಿನ ಸಿಓಡಿಪಿ ಮದರ್ ತೆರೇಸಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತರಬೇತುದಾರ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದುರ್ಗದಾಸ್ ಶೆಟ್ಟಿ ಭಾಗವಹಿಸಿ, ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಪಾತ್ರ, ಪರಿಣಾಮಕಾರಿ ನಾಯಕತ್ವ ಕೌಶಲ್ಯಗಳು ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ಸಿಓಡಿಪಿ ಪ್ರವರ್ತಿತ ಸಂಘ, ಮಹಾಸಂಘ ಹಾಗೂ ಒಕ್ಕೂಟಗಳ ಪ್ರತಿನಿಧಿಗಳು ಭಾಗವಹಿಸಿ, ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ನಾಯಕತ್ವದ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು. ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮೃದ್ಧಿ ಜಿಲ್ಲಾ ಮಹಿಳಾ ಒಕ್ಕೂಟ, ಮಂಗಳೂರು ಇದರ ಅಧ್ಯಕ್ಷರಾದ ಜಯಶ್ರೀ, ಯೋಜನಾ ಸಂಯೋಜಕಿ ಸುಪ್ರಿಯಾ ಎಂ.ಎ. ಹಾಗೂ ಸಂಸ್ಥೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಿಳೆಯರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರ ಜೊತೆಗೆ, ಸ್ಥಳೀಯ ಆಡಳಿತದಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವು ಮಹತ್ವದ ಹೆಜ್ಜೆಯಾಯಿತು.

You may also like

News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ
News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion

You cannot copy content of this page