September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ. ಆಗಸ್ಟ್ 27ರಂದು ಗುರುವಾರ ನಡೆದ ಈ ದುರ್ಘಟನೆಯಲ್ಲಿ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಹಾಗೂ ವಿಮಾನ ತರಬೇತುದಾರ ಸಾಚಿನ್ ಭಾಟಿಯಾ ಮೃತಪಟ್ಟಿದ್ದಾರೆ.

ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಕುಟುಂಬದೊಂದಿಗೆ ಆಗಾಗ್ಗೆ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಗಸ್ಟ್ 27ರಂದು ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ನಾಥಪುರವಾ ಪ್ರದೇಶದಲ್ಲಿ ತರಬೇತಿ ವಿಮಾನ ಪತನಗೊಂಡಿತ್ತು. ಗಾರ್ಗ್ ಏವಿಯೇಷನ್‌ಗೆ ಸೇರಿದ ನಾಲ್ಕು ಆಸನಗಳ ಅವಳಿ ಎಂಜಿನ್ ವಿಮಾನವು ಬೆಳಗ್ಗೆ ಸುಮಾರು 11.30ಕ್ಕೆ ಹಾರಾಟ ಆರಂಭಿಸಿ, ಸುಮಾರು 20 ನಿಮಿಷಗಳ ಬಳಿಕ ವಾಪಸ್ ಬರುತ್ತಿದ್ದ ವೇಳೆ ಪತನಗೊಂಡಿತ್ತು. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅಭಿಷೇಕ್ ಅವರ ಕುಟುಂಬದವರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಅಪಘಾತದ ಕುರಿತು ಡಿಜಿಸಿಎ ಹಾಗೂ ಏರ್‌ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ (AAIB) ತನಿಖೆ ನಡೆಸುತ್ತಿವೆ.

You may also like

News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ
News

National Nutrition Week 2026 Celebrated with a Focus on Healthy Choices and Better Health

“Nourishing Lives Through Healthy Choices” National Nutrition Week 2026 was observed with the theme “Nourishing Lives Through Healthy Choices” through

You cannot copy content of this page