September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್, ಕಂದಾಯ ಇಲಾಖೆಯ ಸೇವೆಯು ವಿವಿಧ ಒತ್ತಡ ಮತ್ತು ಜಂಜಾಟಗಳ ನಡುವೆಯೂ ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಮಹತ್ವದ ಕರ್ತವ್ಯವಾಗಿದೆ. ನಿವೃತ್ತಿಯು ಸರ್ಕಾರಿ ನೌಕರರ ಜೀವನದ ನಿಶ್ಚಿತ ಹಂತವಾಗಿದ್ದರೂ, ಸೇವಾವಧಿಯಲ್ಲಿ ಸಲ್ಲಿಸಿದ ಪ್ರಾಮಾಣಿಕ ಜನಸೇವೆ ಸದಾ ಜನರ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದರು.

ನಿವೃತ್ತಿಯ ಬಳಿಕವೂ ಆಶಾವಾದದೊಂದಿಗೆ ಹೊಸ ಜೀವನಶೈಲಿಯನ್ನು ಅಳವಡಿಸಿಕೊಂಡು ನೆಮ್ಮದಿ ಹಾಗೂ ಸಂತೋಷದಿಂದ ಜೀವನ ಸಾಗಿಸಲಿ ಎಂದು ಅವರು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರು ತಮ್ಮ 32 ವರ್ಷಗಳ ಸೇವಾವಧಿಯಲ್ಲಿ ಎದುರಿಸಿದ ಅನುಭವಗಳು ಹಾಗೂ ಜೀವನದ ಏಳುಬೀಳುಗಳನ್ನು ಸ್ಮರಿಸಿದರು. ಸರ್ಕಾರಿ ಕೆಲಸವನ್ನು ಪ್ರೀತಿಯಿಂದ ನಿರ್ವಹಿಸಿ, ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದಾಗ ನಿವೃತ್ತಿಯ ಬಳಿಕವೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂಬುದು ತಮ್ಮ ನಂಬಿಕೆ ಎಂದು ಹೇಳಿದರು. ಸರ್ಕಾರಿ ನೌಕರರು ಪ್ರಾಮಾಣಿಕತೆ, ಶಿಸ್ತು ಹಾಗೂ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್‌ಗಳಾದ ನರೇಂದ್ರನಾಥ್ ಮಿತ್ತೂರು, ದಿವಾಕರ ಮುಗುಳಿಯಾ, ಶಿವಪ್ರಸಾದ್, ನವೀನ್ ಕುಮಾರ್ ಬೆಂಜನಪದವು, ಆಶಿಫ್ ಇಕ್ಬಾಲ್ ಹಾಗೂ ರಶ್ಮಿ ಕೂಡ್ಲು, ಕಂದಾಯ ನಿರೀಕ್ಷಕರಾದ ವಿಜಯ್ ಆರ್. ಮತ್ತು ಪ್ರಶಾಂತ್ ಶೆಟ್ಟಿ, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಮಂಜುನಾಥ್, ಪುತ್ತೂರು ಗ್ರಾಮ ಆಡಳಿತಾಧಿಕಾರಿ ಶ್ರೀಕಲಾ, ನಿವೃತ್ತ ಸರ್ಕಾರಿ ಅಧಿಕಾರಿ ಜ್ಯೂಲಿಯೆಟ್ ಫೆರ್ನಾಂಡಿಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗ್ರಾಮ ಆಡಳಿತಾಧಿಕಾರಿ ಕೃತಿಕಾ ದೀರಜ್ ಸ್ವಾಗತಿಸಿದರು. ಗ್ರಾಮ ಆಡಳಿತಾಧಿಕಾರಿ ವಿನುತಾ ವಂದಿಸಿದರು. ಗ್ರಾಮ ಆಡಳಿತಾಧಿಕಾರಿ ವೈಶಾಲಿ ಸುದೀಶ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ

You cannot copy content of this page