September 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲತಾ ಮಾರಿಯಾ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕೆಲಸದವರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 44 ವರ್ಷ ಪ್ರಾಯದ ಲತಾ ಮಾರಿಯಾಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಕಾವೂರು ಪೊಲೀಸ್ ಠಾಣಾ ಅ.ಕ್ರ. 33/2019, ಕಲಂ 381 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಮಾನ್ಯ ಹಿರಿಯ ಸಿಜೆ ಮತ್ತು ಸಿಜೆಎಂ ನ್ಯಾಯಾಲಯದ LPC No.05/2024 ಪ್ರಕರಣದಲ್ಲಿ ಲತಾ ಮಾರಿಯಾ ಅವರ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಲಾಗಿತ್ತು. ಬಳಿಕ ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ಆರೋಪಿತೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜ್ಯೋತಿನಗರದಲ್ಲಿ ಲತಾ ಮಾರಿಯಾ ಅವರನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ. ಬಂಧಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

Japanese Delegation from Kyoto Kagaku Visits Father Muller Charitable Institutions

A delegation from Kyoto Kagaku, Japan, visited the Father Muller Charitable Institutions (FMCI) on Monday, September 7, 2026. The delegation
News

ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ನೂತನ ಸಾರಥಿ – ಪದ್ಮರಾಜ್ ಆರ್. ಪೂಜಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ

You cannot copy content of this page