ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ನೂತನ ಸಾರಥಿ – ಪದ್ಮರಾಜ್ ಆರ್. ಪೂಜಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ವಿವಿಧ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯನ್ನು ಪ್ರಕಟಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.



ಪದ್ಮರಾಜ್ ಆರ್. ಪೂಜಾರಿ ಅವರು ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಂಘಟನಾ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದು, ಪಕ್ಷದ ಸಂಘಟನೆ ಬಲಪಡಿಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.




